ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.
ಸಭೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಸ್ತುತ ಶೈಕ್ಷಣಿಕ ಪ್ರಗತಿ, ತರಗತಿಯಲ್ಲಿನ ಕಲಿಕೆಯ ಸ್ಥಿತಿ, ವಿಷಯವಾರು ಸಾಧನೆ ಹಾಗೂ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರಿಸಲಾಯಿತು. ವಿದ್ಯಾರ್ಥಿಗಳು ನಿಯಮಿತವಾಗಿ ತರಗತಿಗಳಿಗೆ ಹಾಜರಾಗುವುದು, ಪ್ರತಿದಿನದ ಪಾಠವನ್ನು ಅಂದೇ ಪುನರಾವರ್ತಿಸುವುದು, ಸಂದೇಹಗಳನ್ನು ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳುವುದು ಹಾಗೂ ಪರೀಕ್ಷೆಗಳಿಗೆ ವ್ಯವಸ್ಥಿತವಾಗಿ ಸಿದ್ಧತೆ ನಡೆಸುವುದು ಅಗತ್ಯವೆಂದು ತಿಳಿಸಲಾಯಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಸಮಯಪಾಲನೆ, ಶಿಸ್ತು, ಜವಾಬ್ದಾರಿಯುತ ನಡವಳಿಕೆ ಮತ್ತು ಉತ್ತಮ ಅಭ್ಯಾಸಗಳ ಬಗ್ಗೆಯೂ ಪೋಷಕರಿಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳ ಅಧ್ಯಯನದ ಮೇಲೆ ನಿರಂತರ ನಿಗಾ ವಹಿಸುವುದರ ಜೊತೆಗೆ, ಅವರಲ್ಲಿ ಆತ್ಮವಿಶ್ವಾಸ ಹಾಗೂ ಕಲಿಕೆಯ ಆಸಕ್ತಿಯನ್ನು ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಲಾಯಿತು.
ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ, ಉಪನ್ಯಾಸಕ ವೃಂದವರು ಹಾಗೂ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಪಾಲ್ಗೊಂಡಿದ್ದರು.

.png)
