ವಿವೇಕಾನಂದ ಪ.ಪೂ. ಕಾಲೇಜಿನಲ್ಲಿ ಪ್ರಥಮ ,ದ್ವಿತೀಯ ವಾಣಿಜ್ಯ ಹಾಗೂ ಕಲಾ ವಿಭಾಗದ ಪೋಷಕರ ಸಭೆ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ, ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು.  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಡೆಸಲ್ಪಡುತ್ತಿರುವ  ಘಟಕ ಆಧಾರಿತ ಪರೀಕ್ಷೆಗಳು, ಆಂತರಿಕ ಮೌಲ್ಯಮಾಪನ, ನಿಯೋಜಿತ ಕಾರ್ಯಗಳು, ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಮಾಹಿತಿಗಳನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ  ದೇವಿಪ್ರಸಾದ್  ಹಾಗೂ ಶ್ರೀಧರ್ ಶೆಟ್ಟಿಗಾರ್ ನೀಡಿದರು. 


ಪೋಷಕರ ಸಭೆಯಲ್ಲಿ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್. ಉಪಸ್ಥಿತರಿದ್ದರು.   ವಾಣಿಜ್ಯ, ಕಲಾ ಹಾಗೂ  ಭಾಷಾ ವಿಭಾಗದ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top