ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ವಿವೇಕ ಚಂದನ ಬಂಧನ-ರಕ್ಷಾ

Upayuktha
0


ಪುತ್ತೂರು: ವಿನೂತನ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಮಾಜಿಕ ಸಂಸ್ಥೆಗಳೊಂದಿಗೆ ರಕ್ಷಾ ಬಂಧನ ಆಚರಿಸಿ ಸಮಾಜಕ್ಕೆ ಮಾದರಿಯಾದ ವಿದ್ಯಾರ್ಥಿ ಸಮೂಹ ರಾಷ್ಟ್ರೀಯತೆಯ ನಿರ್ಮಾಣ ಹಾಗೂ ಮಾನವೀಯತೆಯ ಅನಾವರಣದೊಂದಿಗೆ ಸಹೋದರತೆಯ ಸಂದೇಶ ನೀಡುವ ಸಹೃದಯ ಸಹಕಾರಗಳ ಸಂಕೇತವಾದ ರಕ್ಷಾ ಬಂಧನವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ “ವಿವೇಕ ಚಂದನ ರಕ್ಷಾ ಬಂಧನ" ಎಂಬ ಶೀರ್ಷಿಕೆಯೊಂದಿಗೆ ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ಆರಕ್ಷಕ ಠಾಣೆ,ಪತ್ರಿಕಾ ಕಛೇರೆ, ಆಸ್ಪತ್ರೆ,ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ರಕ್ಷೆಯನ್ನು ಕಟ್ಟಿ, ರಕ್ಷಾ ಬಂಧನ ಸಂದೇಶ ನೀಡಿ, ಸಿಹಿತಿಂಡಿ ವಿತರಿಸಿ ಸಂಭ್ರಮಿಸಿದರು. 


ತಮ್ಮ ಶಾಲೆಗಳಿಗೆ ಭೇಟಿ ನೀಡಿದ ವಿದ್ಯಾರ್ಥಿಗಳು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿದ ಶಾಲೆಗಳಿಗೆ ಭೇಟಿ ನೀಡಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಾಗೂ ಶಿಕ್ಷಕ ವೃಂದದವರಿಗೆ ರಕ್ಷೆ ಕಟ್ಟಿ ರಕ್ಷಾ ಬಂಧನ ಸಂದೇಶ ನೀಡಿ, ಸಿಹಿ ತಿಂಡಿ ಹಂಚಿ ಆಶೀರ್ವಾದ ಪಡೆದದ್ದು ವಿಶೇಷವಾಗಿತ್ತು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top