ಮಂಗಳೂರು: ಇಲ್ಲಿನ ‘ದಣಿವರಿಯದ ವಿಪ್ರಮನೆ’ಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಯಕ್ಷಗಾನ ರಂಗದ ಉದಯೋನ್ಮುಖ, ಆಕರ್ಷಕ ಭಾಗವತ ಡಾ. ಪ್ರಖ್ಯಾತ್ ಶೆಟ್ಟಿ, ಅಳಿಕೆ ಅವರನ್ನು ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವರ್ಕಾಡಿಯವರು ಅಭಿನಂದನಾ ನುಡಿಗಳನ್ನಾಡಿ, ಡಾ. ಪ್ರಖ್ಯಾತ್ ಶೆಟ್ಟಿ ಅವರ ಗಾಯನ ಶೈಲಿ ಹಾಗೂ ಯಕ್ಷಗಾನ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಉಪನ್ಯಾಸಕಿ ಡಾ. ಪದ್ಮನಯನಾ ಅವರು ಸನ್ಮಾನ ಪತ್ರವನ್ನು ವಾಚಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ಣಾಟಕ ಬ್ಯಾಂಕ್‌ನ ಜನರಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ, ಹಿರಿಯ ಸಾಹಿತಿ ಡಾ. ಹರಿಕೃಷ್ಣ ಪುನರೂರು, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ, ಎಂ. ಎಸ್. ಗುರುರಾಜ್ ಹಾಗೂ ರಮೇಶ ಕಲ್ಬಾವಿ ಸೇರಿದಂತೆ ಹಲವು ಪ್ರಮುಖ ಗಣ್ಯರು ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ದುರ್ಗಾದಾಸ್ ಕಟೀಲು ಅವರು ಎಲ್ಲ ಅತಿಥಿಗಳಿಗೆ ಮತ್ತು ಅಭ್ಯಾಸಕರಿಗೆ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


