ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಉಪನಿರ್ದೇಶಕರ ಕಚೇರಿ ಮಂಗಳೂರು ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ತಂಡ ಪ್ರಶಸ್ತಿ ಪಡೆದಿರುತ್ತಾರೆ.
ಈ ತಂಡದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಮನ್ವಿತ್ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಶೃಜನ್ ಜೆ ರೈ (ಆರ್ಟಿಸ್ಟಿಕ್) ವಿಭಾಗದಲ್ಲಿ ದ್ವಿತೀಯ ಹಾಗೂ ವಿಜ್ಞಾನ ವಿಭಾಗದ ಸ್ಕಂದ ಬಲ್ಲಕ್ಕುರಾಯ (ಟ್ರಡಿಷನಲ್) ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.


