ಯುವ ರೆಡ್‌ಕ್ರಾಸ್ ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಸೇವಾ ಮನೋಭಾವ ಬೆಳೆಸುತ್ತದೆ: ದೀಕ್ಷಿತಾ ಟಿ.ಎಸ್.

Upayuktha
0

ಸುರತ್ಕಲ್: ಯುವ ರೆಡ್‌ಕ್ರಾಸ್ ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಸೇವಾ ಮನೋಭಾವ, ಶಿಸ್ತು, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯಂತಹ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಭಾರತೀಯ ರೆಡ್‌ಕ್ರಾಸ್ ಸೋಸೈಟಿಯ ಆಶಯಗಳಿಗೆ ಅನುಗುಣವಾಗಿ ಯುವ ರೆಡ್‌ಕ್ರಾಸ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ದೇಶದ ಆಸ್ತಿಯಾಗಿರುವ ಯುವ ಜನಾಂಗವು ಇಂತಹ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಸೆಂಟ್ ಮಹಿಳಾ ಕಾಲೇಜು, ಮಂಗಳೂರಿನ ಯುತ್ ರೆಡ್‌ಕ್ರಾಸ್ ಕಾರ್ಯಕ್ರಮಾಧಿಕಾರಿ ದೀಕ್ಷಿತಾ ಟಿ.ಎಸ್. ಹೇಳಿದರು.


ಅವರು ಸುರತ್ಕಲ್ ಹಿಂದು ವಿದ್ಯಾದಾಯಿನೀ ಸಂಘ (ರಿ.)ಯ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಯುವ ರೆಡ್‌ಕ್ರಾಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಯುವ ರೆಡ್‌ಕ್ರಾಸ್‌ನ ಉದ್ದೇಶಗಳು ಹಾಗೂ ವಿದ್ಯಾರ್ಥಿಗಳಲ್ಲಿ ಅದರ ಮಹತ್ವದ ಕುರಿತು ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ. ಸಮಾಜದ ಅಗತ್ಯಗಳನ್ನು ಅರಿತುಕೊಂಡು ಇತರರಿಗೆ ನೆರವಾಗುವ ಮನೋಭಾವ ಯುವಕರಲ್ಲಿ ಬೆಳೆದಾಗ ಆರೋಗ್ಯಕರ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಯುವ ರೆಡ್‌ಕ್ರಾಸ್‌ನಂತಹ ಸಂಘಟನೆಗಳು ವಿದ್ಯಾರ್ಥಿಗಳಿಗೆ ಸೇವಾ ಚಟುವಟಿಕೆಗಳಲ್ಲಿ ನೇರವಾಗಿ ತೊಡಗಿಸಿಕೊಳ್ಳಲು ಉತ್ತಮ ವೇದಿಕೆಯನ್ನು ಒದಗಿಸುತ್ತವೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ಮಾತನಾಡಿ, ಯುವ ರೆಡ್‌ಕ್ರಾಸ್ ವಿದ್ಯಾರ್ಥಿಗಳಲ್ಲಿ ಸಮಾಜಸೇವೆಯ ಮನೋಭಾವವನ್ನು ಬೆಳೆಸುವ ಜೊತೆಗೆ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಯುವ ರೆಡ್‌ಕ್ರಾಸ್ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿ ಹಾಗೂ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.


ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾ. ಸೌಮ್ಯ ಪ್ರವೀಣ್ ಕೆ. ಹಾಗೂ ಬಬಿತಾ ನವೀನ್‌ಚಂದ್ರ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಧನ್ಯಕುಮಾರ್ ವೆಂಕಣ್ಣವರ್, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಭಾಗ್ಯಲಕ್ಷ್ಮೀ ಎಂ., ಗ್ರಂಥಪಾಲಕಿ ಡಾ. ಸುಜಾತ ಬಿ., ವ್ಯವಹಾರ ಅಧ್ಯಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಶ್ರೀದೇವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಅಂಜಲಿ ಸ್ವಾಗತಿಸಿದರು. ವೈಷ್ಣವಿ ಅತಿಥಿಗಳನ್ನು ಪರಿಚಯಿಸಿದರು. ಪ್ರಿನ್ಸಿತಾ ಕಾರ್ಯಕ್ರಮ ನಿರೂಪಿಸಿದರು. ಶ್ರದ್ಧಾ ವಂದಿಸಿದರು.


ವಿದ್ಯಾರ್ಥಿಗಳಿಗೆ ಯುವ ರೆಡ್‌ಕ್ರಾಸ್‌ನ ಉದ್ದೇಶ, ಕಾರ್ಯಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆಯಲ್ಲಿ ಯುವಕರ ಪಾತ್ರದ ಕುರಿತು ಅರಿವು ಮೂಡಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top