ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು: ಸುಜಯೇಂದ್ರ ಹಂದೆ

Shreya Hegde
0


ತೆಂಕನಿಡಿಯೂರು: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ, ಸ್ನೇಹ, ಪರೋಪಕಾರ ಸೇರಿದಂತೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು ಹೃದಯವಂತರಾಗಿ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸರಸ್ವತಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸುಜಯೇಂದ್ರ ಹಂದೆಯವರು ಹೇಳಿದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜು  ಹಾಗೂ  ಸ್ನಾತಕೋತ್ತರ  ಅಧ್ಯಯನ ಕೇಂದ್ರ, ತೆಂಕನಿಡಿಯೂರು ಇಲ್ಲಿನ ಕನ್ನಡ ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗ ಮತ್ತು ಗಿಳಿವಿಂಡು (ರಿ.), ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಸಹಯೋಗದಲ್ಲಿ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.


ಬದುಕಿನಲ್ಲಿ ಸುಖ, ನೆಮ್ಮದಿ ಹಾಗೂ ಸಾರ್ಥಕತೆಯನ್ನು ಕಂಡುಕೊಳ್ಳುವ ಬಗೆ ಕುರಿತು ಮಾತನಾಡಿದ ಅವರು, ಮಂಕುತಿಮ್ಮನ ಕಗ್ಗದ ವಿವಿಧ ಪದ್ಯಗಳನ್ನು ಹಾಡುತ್ತಾ ಅವುಗಳಲ್ಲಿರುವ ಜೀವನದರ್ಶನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು. ಮೌಲ್ಯಯುತ ಕಥೆಗಳು ಹಾಗೂ ಪ್ರಸಂಗಗಳ ಮೂಲಕ ಜೀವನದಲ್ಲಿ ಮಾನವೀಯತೆ, ಪ್ರೀತಿ, ಸ್ನೇಹ, ಸಹಾನುಭೂತಿ ಮತ್ತು ಪರೋಪಕಾರದ ಮಹತ್ವವನ್ನು ವಿವರಿಸಿದರು.


ಗಿಳಿವಿಂಡು (ರಿ.) ಸಂಸ್ಥೆಯ ಅಧ್ಯಕ್ಷ ಪ್ರೊ. ಶಿವರಾಮ ಶೆಟ್ಟಿ ಮಾತನಾಡಿ, ಗಿಳಿವಿಂಡು ತಂಡದ ವಿಶೇಷ ಉಪನ್ಯಾಸ ಸರಣಿಯ ಆಶಯ ಹಾಗೂ ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂಸ್ಥೆಯ ಸದಸ್ಯ ಪ್ರೊ. ಕೃಷ್ಣಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.


ಕಾಲೇಜಿನ ಹಿರಿಯ ಪ್ರಾಧ್ಯಾಪಕಿ  ಹಮೀದಾ ಭಾನು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಮಾರುತಿ ಸ್ವಾಗತಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕಿ ಶ್ರೀಮತಿ ರತ್ನಮಾಲ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಭವ್ಯ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top