ಮಂಗಳೂರು: ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯ ಕುರಿತು ಜನಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಮೆಸ್ಕಾಂ ಕಾವೂರು ಉಪವಿಭಾಗದಿಂದ ಆಯೋಜಿಸಲಾದ ಸೇವಾ ಸೇತು ಅಭಿಯಾನಕ್ಕೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಯೋಜನೆಯ ಅನುಷ್ಠಾನದ ಕುರಿತು ಮಾಹಿತಿ ಪಡೆದ ಶಾಸಕರು, ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಸೌರಶಕ್ತಿಯ ಬಳಕೆಯನ್ನು ಉತ್ತೇಜಿಸುವ ಮೂಲಕ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಕೇಂದ್ರ ಸರ್ಕಾರದ ಈ ಯೋಜನೆ ಸಹಕಾರಿಯಾಗಲಿದೆ.

