ಕ್ರೀಡೆಯು ನಾಯಕತ್ವದ ಗುಣ ಬೆಳೆಸುತ್ತದೆ: ಮಹಾಂತೇಶ ಕಡಪಟ್ಟಿ

Shreya Hegde
0

‌

ಹುನಗುಂದ: "ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದ್ದು, ಶಿಸ್ತು, ಸಮಯ ಪ್ರಜ್ಞೆ, ತಂಡದ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುತ್ತದೆ" ಎಂದು ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಮಹಾಂತೇಶ ಕಡಪಟ್ಟಿ ಹೇಳಿದರು.


ಸ್ಥಳೀಯ ವಿ.ಎಂ.ಎಸ್.ಆರ್. ವಸ್ತ್ರದ ಕಲಾ ಮಹಾವಿದ್ಯಾಲಯದ ಆಶ್ರಯದಲ್ಲಿ, ಬಾಗಲಕೋಟೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸೋಮವಾರ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪದವಿ ಪೂರ್ವ ಮಹಾವಿದ್ಯಾಲಯಗಳ ಬಾಲ್ ಬ್ಯಾಡ್ಮಿಂಟನ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಂಡಲೀಕ ಕಾಂಬ್ಳೆ, "ಶಿಕ್ಷಣ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕ್ರೀಡೆಗಳು ನಮ್ಮ ಮನಸ್ಸನ್ನು ಬಲಪಡಿಸುತ್ತವೆ. ಸೋಲನ್ನು ಸ್ವೀಕರಿಸುವ ಮನೋಭಾವ ಹಾಗೂ ಗೆಲುವನ್ನು ವಿನಯದಿಂದ ಸಂಭ್ರಮಿಸುವ ಗುಣವನ್ನು ಕ್ರೀಡೆ ನಮಗೆ ಕಲಿಸುತ್ತದೆ," ಎಂದು ಅಭಿಪ್ರಾಯಪಟ್ಟರು.


ಪ್ರಾಸ್ತಾವಿಕವಾಗಿ ಮಾತನಾಡಿದ ಕ್ರೀಡಾ ನಿರ್ದೇಶಕ ಎಸ್. ಬಿ. ಚಳಗೇರಿ, "ವಿದ್ಯಾರ್ಥಿಗಳು ನಿರಂತರ ಅಭ್ಯಾಸ ಮಾಡಿ, ಶಿಸ್ತನ್ನು ಪಾಲಿಸಿ ನೈಜ ಕ್ರೀಡಾಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು," ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಎಸ್.ಬಿ.ಐ ಬ್ಯಾಂಕಿನ ಹಿರಿಯ ಅಧಿಕಾರಿ ರವಿ ಜೋಶಿ, ಹಿರಿಯ ದೈಹಿಕ ಶಿಕ್ಷಣ ಉಪನ್ಯಾಸಕ ಜಿ.ಎಸ್. ಜನವಾಡ, ಸಂಘದ ನಿರ್ದೇಶಕರಾದ ಬಸವರಾಜ ಕೆಂದೂರ, ರವಿ ಹುಚನೂರು, ಉಚಿತ ಪ್ರಸಾದ ನಿಲಯದ ಕಾರ್ಯಾಧ್ಯಕ್ಷ ಸಂಗಣ್ಣ ಚಿನಿವಾಲರ, ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಆರ್. ಗೋಲಗೊಂಡ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್.ಎಸ್. ಬೋಳಿಶೆಟ್ಟರ, ಕ್ರೀಡಾ ಸಂಯೋಜಕ ಎ.ಎಲ್. ಬದಾಮಿ ಹಾಗೂ ಎಫ್. ಎಂ. ರಾಮವಾಡಗಿ ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top