ಹಿರಿಯ ನಟ ನಾನಾ ಪಾಟೇಕರ್ ನಿಧನ

Upayuktha
0


ಪಣಜಿ: ಭಾರತೀಯ ಚಿತ್ರರಂಗದ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಿಗ್ಗೆ ಗೋವಾದಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾದರು.


ಗೋವಾದ ಡೋನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಅಸ್ವಸ್ಥರಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರು ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ಮೂಲಕ ಚಿಕಿತ್ಸೆ ನೀಡಿದರೂ ಯಾವುದೇ ಸ್ಪಂದನೆ ದೊರೆಯದೆ ಮೃತಪಟ್ಟಿದ್ದಾರೆ. ಬೆಳಿಗ್ಗೆ ಸುಮಾರು 5.20ರ ವೇಳೆಗೆ ಅವರು ನಿಧನರಾದರು ಎಂದು ವೈದ್ಯರು ತಿಳಿಸಿದ್ದಾರೆ.


ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿದ್ದ ನಾನಾ ಪಾಟೇಕರ್ ಅವರು ತಮ್ಮ ವಿಭಿನ್ನ ಹಾಗೂ ಪ್ರಭಾವಶಾಲಿ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. 1978ರಲ್ಲಿ ‘ಗಮನ್’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಬಳಿಕ ‘ಅಂಕುಶ್’, ‘ಪರಿಂಡಾ’, ‘ಕ್ರಾಂತಿವೀರ್’, ‘ತಿರಂಗಾ’, ‘ಪ್ರಹಾರ್’, ‘ಖಾಮೋಶಿ’, ‘ವೆಲ್ಕಮ್’ ಸೇರಿದಂತೆ ಹಲವು ಪ್ರಮುಖ ಚಿತ್ರಗಳಲ್ಲಿ ಅಭಿನಯಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು.


ಪಾತ್ರ ಯಾವುದೇ ಆಗಿರಲಿ, ಅದಕ್ಕೆ ಜೀವ ತುಂಬುವ ಅಭಿನಯ ಸಾಮರ್ಥ್ಯ ಹೊಂದಿದ್ದ ನಾನಾ ಪಾಟೇಕರ್ ಅವರು ಭಾರತೀಯ ಚಿತ್ರರಂಗದ ವಿಶಿಷ್ಟ ನಟರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. ತಮ್ಮ ವೃತ್ತಿಜೀವನದ ಕೊನೆಯ ಹಂತದಲ್ಲಿಯೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.


ಅವರ ನಿಧನದ ಸುದ್ದಿ ಭಾರತೀಯ ಚಿತ್ರರಂಗದಲ್ಲಿ ಆಘಾತ ಮತ್ತು ಶೋಕಕ್ಕೆ ಕಾರಣವಾಗಿದೆ. ನಾನಾ ಪಾಟೇಕರ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top