ಆಳ್ವಾಸ್ ಪದವಿಪೂರ್ವ ಕಾಲೇಜಿನ ಅನಿತಾ ವಿ. ಜೈನ್ ಗೆ ಅತ್ಯುತ್ತಮ ಶಿಕ್ಷಕೇತರ ಸಿಬ್ಬಂದಿ ಪ್ರಶಸ್ತಿ

Upayuktha
0



ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಪ್ರಾಚಾರ್ಯರ ಸಂಘದ ವತಿಯಿಂದ ಇತ್ತೀಚೆಗೆ ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ–2026 ಪ್ರದಾನ ಸಮಾರಂಭದಲ್ಲಿ, ಅತ್ಯುತ್ತಮ ಶಿಕ್ಷಕೇತರ ಸಿಬ್ಬಂದಿ ಪ್ರಶಸ್ತಿಯನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕಚೇರಿ ಮುಖ್ಯ ಅಧೀಕ್ಷಕಿ ಅನಿತಾ ವಿ. ಜೈನ್ ಪಡೆದುಕೊಂಡರು.


ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ 1999ರಿಂದ ಸೇವೆ ಸಲ್ಲಿಸುತ್ತಿರುವ ಅನಿತಾ ವಿ. ಜೈನ್ ಅವರು ತಮ್ಮ ಸುದೀರ್ಘ ಸೇವಾವಧಿಯಲ್ಲಿ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಹಾಗೂ ಆಡಳಿತಾತ್ಮಕ ಕಾರ್ಯಕ್ಷಮತೆಯ ಮೂಲಕ ಸಂಸ್ಥೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. 


ಕಾಲೇಜಿನ ಕಚೇರಿ ನಿರ್ವಹಣೆ, ಆಡಳಿತಾತ್ಮಕ ಕಾರ್ಯಗಳು ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸಂಬಂಧಿಸಿದ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುತ್ತಾ ಬಂದಿರುವ ಅವರು, ಸಂಸ್ಥೆಯ ದೈನಂದಿನ ಕಾರ್ಯಚಟುವಟಿಕೆಗಳ ಸುಗಮ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.


ಶಿಕ್ಷಣ ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ಶಿಕ್ಷಕೇತರ ಸಿಬ್ಬಂದಿಯ ಪಾತ್ರವನ್ನು ಗುರುತಿಸುವ ನಿಟ್ಟಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು, ಅನಿತಾ ವಿ. ಜೈನ್ ಅವರ ದೀರ್ಘಕಾಲೀನ ಸೇವೆ ಹಾಗೂ ಕಾರ್ಯನಿಷ್ಠೆಗೆ ಸಂದ ಗೌರವವಾಗಿದೆ. ಬೆಳುವಾಯಿ ಕೆಸರಗದ್ದೆಯ ವಿಜಯಕುಮಾರ್ ಜೈನ್‌ರವರ ಧರ್ಮಪತ್ನಿಯಾಗಿರುವ ಅನಿತಾ ವಿ. ಜೈನ್ ಆಳ್ವಾಸ್ ಪದವಿಪೂರ್ವ ಕಾಲೇಜಿನೊಂದಿಗೆ ಕಳೆದ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.  ಅವರ ಈ ಸಾಧನೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top