ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ - 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾರೆ.
ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.


