ಪುತ್ತೂರು: ಕಳೆದ ಸೆಪ್ಟೆಂಬರ್ 29 ಮತ್ತು 30 ರಂದು ಉಜಿರೆಯ ಎಸ್. ಡಿ. ಎಂ, ಕಾಲೇಜಿನಲ್ಲಿ ಜರಗಿದ 2026 - 27 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ನಾಲ್ಕನೇ ಸ್ಥಾನವನ್ನು ಗಳಿಸುವ ಮೂಲಕ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಕ್ರೀಡಾ ವಿದ್ಯಾರ್ಥಿಗಳು ವಿಶೇಷ ಸಾಧನೆಯನ್ನು ಮಾಡಿದ್ದಾರೆ.
ಸುಮಾರು 30 ಕಾಲೇಜುಗಳು ಭಾಗವಹಿಸಿದಂತಹ ಈ ಪಂದ್ಯಾಟದ ಪೂರ್ವಭಾವಿಯಾಗಿ ನಡೆದಂತಹ ಪ್ರಿಲಿಮಿನರಿ ಹಂತದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಪಡೆದುಕೊಂಡಿದ್ದಾರೆ. ಕು ತೃಶಾ.- ದ್ವಿತೀಯ ಬಿ ಕಾಂ, ಉತ್ತಮ ರೈಡರ್ ಪ್ರಶಸ್ತಿಯನ್ನು ಗಳಿಸಿದ್ದಾರೆ.
ತಂಡವನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು, ಅನ್ನಪೂರ್ಣ ರೈ - ತೃತೀಯ ಬಿಬಿಎ, ಭೂಮಿಕಾ - ತೃತೀಯ ಬಿಎ, ಹೇಮಲತಾ - ತೃತೀಯ ಬಿಎ, ರಶ್ಮಿತ. ಎನ್ - ತೃತೀಯ ಬಿಸಿಎ, ನಿಕ್ಷಿತ - ದ್ವಿತೀಯ ಬಿಕಾಂ, ಅಮೂಲ್ಯ ಪಿ ಆರ್ - ದ್ವಿತೀಯ ಬಿಕಾಂ, ವರ್ಷಿತ ಹೆಚ್ ವಿ - ದ್ವಿತೀಯ ಬಿ ಸಿ ಎ , ಆದ್ಯ ಬಿ ಆರ್ - ಪ್ರಥಮ ಬಿಕಾಂ, ಸೋನಾಲಿ ಎಸ್ಎನ್ - ಪ್ರಥಮ ಬಿಬಿಎ. ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಯತೀಶ್ ಕುಮಾರ್ ಹಾಗೂ ಡಾ. ಜ್ಯೋತಿ ಇವರು ತರಬೇತಿ ನೀಡಿದ್ದಾರೆ.
ತಂಡದ ಈ ಸಾಧನೆಯಿಂದಾಗಿ ಕಾಲೇಜು ಮುಂದಿನ ವರ್ಷ ನಡೆಯುವ ಪಂದ್ಯಾಟದಲ್ಲಿ ನೇರವಾಗಿ ಕ್ವಾರ್ಟರ್ ಫೈನಲ್ ಹಂತದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಗಳಿಸಿದೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

.png)
