ಸಂತ ಫಿಲೋಮಿನಾ PU ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Upayuktha
0



ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು  ಕಾಲೇಜು ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.  


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.


ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ  ಉಪಸ್ಥಿತರಿದ್ದರು.  ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top