ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ 'ಅಂಬಿಯೋರ- 2026' ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.


