ತೆಂಕನಿಡಿಯೂರು ಕಾಲೇಜಿನಲ್ಲಿ ಮಹಾತ್ಮಾ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

Upayuktha
0



ಉಡುಪಿ: ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ರೋವರ್ಸ್ ಮತ್ತು ರೇಂಜರ್ಸ್, ಎನ್.ಎಸ್.ಎಸ್., ಯುವ ರೆಡ್ ಕ್ರಾಸ್ ಘಟಕ ಮತ್ತು ಐಕ್ಯೂಎಸಿ (IQAC) ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು  ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸರ್ವ ಧರ್ಮ ಪ್ರಾರ್ಥನಾ ಕಾರ್ಯಕ್ರಮ ನಡೆಸಲಾಯಿತು.


ಈ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ಅವರು ವಹಿಸಿದ್ದರು. ಮಹಾಪುರುಷರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಕರ್ತವ್ಯನಿಷ್ಠೆಯ ಮೌಲ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 


ಇದೇ ಸಂದರ್ಭದಲ್ಲಿ ವಿವಿಧ ಧರ್ಮಗಳ ಸಾರವನ್ನು ಸಾರುವ ಸರ್ವ ಧರ್ಮ ಪ್ರಾರ್ಥನೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ. ರಘು ನಾಯ್ಕ್, ಸಹ ಪ್ರಾಧ್ಯಾಪಕರಾದ ಉಮೇಶ್ ಪೈ ಮತ್ತು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು  ಉಪಸ್ಥಿತರಿದ್ದರು. 


ರೋವರ್ ಸ್ಕೌಟ್ ಲೀಡರ್ ಮರ್ವಿನ್ ಡಿಸೋಜ, ರೇಂಜರ್ ಲೀಡರ್ ಸುಷ್ಮಾ ಟಿ,  ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳಾದ ಬಾಲರಾಜ್ ಡಿ ಬಿ ಮತ್ತು ಡಾ. ಜಯಮಂಗಳ ಕಾರ್ಯಕ್ರಮವನ್ನು ಸಂಯೋಜಿಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ಎನ್.ಎಸ್.ಎಸ್., ರೋವರ್ಸ್-ರೇಂಜರ್ಸ್, ಯುವ ರೆಡ್ ಕ್ರಾಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ತರಗತಿ ಮತ್ತು ಸುತ್ತಮುತ್ತ ಸ್ವಚ್ಛತೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಅಂತ್ಯಗೊಳಿಸಲಾಯಿತು.



إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top