ಉಜಿರೆ ಎಸ್.ಡಿ.ಎಂ. ಆಸ್ಪತ್ರೆ ; ₹1.10 ಕೋಟಿ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆ

Upayuktha
0



ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಸೆಪ್ಟೆಂಬರ್‌ವರೆಗಿನ ಒಂಬತ್ತು ತಿಂಗಳ ಅವಧಿಯಲ್ಲಿ ಒಟ್ಟು ₹1 ಕೋಟಿ 10 ಲಕ್ಷ ವೆಚ್ಚದಲ್ಲಿ 7,300 ಉಚಿತ ಡಯಾಲಿಸಿಸ್ ಸೇವೆಗಳನ್ನು ಒದಗಿಸಲಾಗಿದೆ.


ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಈ ಉಚಿತ ಡಯಾಲಿಸಿಸ್ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಎಸ್.ಡಿ.ಎಂ. ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿ.ಇ.ಒ.) ಜನಾರ್ದನ ಎಂ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top