ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿಗೆ ಪಿಎಚ್.ಡಿ. ಪದವಿ

Shreya Hegde
0

ಆಹಾರ ಭದ್ರತಾ ಕಾಯ್ದೆಯ ಅನುಷ್ಠಾನ ಕುರಿತು ಸಂಶೋಧನೆ, ಭಾರತದ ಮುಖ್ಯ ನ್ಯಾಯಮೂರ್ತಿಯಿಂದ ಪದವಿ ಪ್ರದಾನ




ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ರಶ್ಮಿ ಶೆಟ್ಟಿ, ಭಾರತೀಯ ರಾಷ್ಟಿçÃಯ ಕಾನೂನು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದರು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ರವರು ಪದವಿ ಪ್ರದಾನ ಮಾಡಿದರು. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ರಂಗಭೂಮಿ ಕಲಾವಿದೆ ಅರುಂಧತಿ ನಾಗ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ರಶ್ಮಿ ಶೆಟ್ಟಿಯವರು ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ–2013ರ ಅನುಷ್ಠಾನ: ಕರ್ನಾಟಕದ ಗ್ರಾಮೀಣ ರಾಮನಗರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಅನುಭವಗಳ ಅಧ್ಯಯನ’ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿದ್ದಾರೆ. ಆಹಾರ ಭದ್ರತೆಗೆ ಸಂಬAಧಿಸಿದ ಕಾನೂನಿನ ಅನುಷ್ಠಾನವು ಗ್ರಾಮೀಣ ಪ್ರದೇಶಗಳ ಪರಿಶಿಷ್ಟ ಜಾತಿ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ಬೀರುವ ಪರಿಣಾಮಗಳು, ಕಾಯ್ದೆಯ ಅನುಷ್ಠಾನದ ಅನುಭವಗಳು ಹಾಗೂ ಅದರ ಸಾಮಾಜಿಕ ಆಯಾಮಗಳನ್ನು ಅಧ್ಯಯನ ಮಾಡಿರುವುದು ಈ ಸಂಶೋಧನೆಯ ಪ್ರಮುಖ ಅಂಶವಾಗಿದೆ. ಭಾರತೀಯ ರಾಷ್ಟಿçÃಯ ಕಾನೂನು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ. ಸರಸು ಎಸ್ತರ್ ಥಾಮಸ್‌ರವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ಪೂರ್ಣಗೊಳಿಸಿದ್ದಾರೆ.


ಎರಡು ದಶಕಗಳಿಗೂ ಅಧಿಕ ಶೈಕ್ಷಣಿಕ ಅನುಭವ:

ಸಂಶೋಧನೆ, ಬೋಧನೆ ಮತ್ತು ಆಡಳಿತ ಕ್ಷೇತ್ರಗಳಲ್ಲಿ ಎರಡು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ರಶ್ಮಿ ಶೆಟ್ಟಿಯವರು ಕಾನೂನು ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿರುವ ಅವರು, ಬೆಂಗಳೂರಿನ ಭಾರತೀಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಕಾನೂನು ಮತ್ತು ನೀತಿ ಆಯ್ಕೆಯಲ್ಲಿ ಸ್ನಾತಕೋತ್ತರ ಕಾನೂನು ಪದವಿ ಪಡೆದಿದ್ದಾರೆ. ಹೈದರಾಬಾದ್ ವಿಶ್ವವಿದ್ಯಾಲಯದಿಂದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದಿದ್ದು, ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿಯೂ ಉತ್ತೀರ್ಣರಾಗಿದ್ದಾರೆ.


ಸಾಮಾಜಿಕ ನ್ಯಾಯ ಮತ್ತು ಕಾರ್ಮಿಕ ನ್ಯಾಯಶಾಸ್ತ್ರದ ಕುರಿತು ಕೃತಿ:

ಕಾನೂನು ಕ್ಷೇತ್ರದ ಅಧ್ಯಯನದ ಜೊತೆಗೆ ಸಾಮಾಜಿಕ ನ್ಯಾಯ ಹಾಗೂ ಮಾನವರ ಹಕ್ಕುಗಳಿಗೆ ಸಂಬAಧಿಸಿದ ವಿಷಯಗಳಲ್ಲಿಯೂ ರಶ್ಮಿ ಶೆಟ್ಟಿಯವರು ಆಸಕ್ತಿ ಹೊಂದಿದ್ದಾರೆ. ಅವರ ‘ಸಾಮಾಜಿಕ ನ್ಯಾಯ ಮತ್ತು ಕಾರ್ಮಿಕ ನ್ಯಾಯಶಾಸ್ತç’ ಕೃತಿಯನ್ನು ಪ್ರತಿಷ್ಠಿತ ಸೇಜ್ ಪ್ರಕಾಶನ ಸಂಸ್ಥೆ ಪ್ರಕಟಿಸಿದೆ. ರಶ್ಮಿ ಶೆಟ್ಟಿಯವರು ಕಾರ್ಕಳ ನಂದಳಿಕೆಯ ಕಾನಬೆಟ್ಟಿನ ಸುಗಂಧಿ ಜೆ. ಶೆಟ್ಟಿ ಹಾಗೂ ದಿವಂಗತ ನ್ಯಾಯವಾದಿ ಬೋಳ ಪರ್ತಿಮಾರುಗುತ್ತು ಜಯರಾಮ ಶೆಟ್ಟಿಯವರ ಪುತ್ರಿ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top