ವಿವೇಕಾನಂದ ಕಾಲೇಜಿನಲ್ಲಿ ‘ಆರ್ ಯು ರೆಡಿ ಫಾರ್ ಇಂಡಸ್ಟ್ರಿ!’ ಕಾರ್ಯಾಗಾರ ಸಂಪನ್ನ

Shreya Hegde
0


ಪುತ್ತೂರು: ವಿದ್ಯಾರ್ಥಿಗಳು ಉದ್ಯೋಗ ಸಂದರ್ಶನಗಳಿಗೆ ಸರಿಯಾದ ತಯಾರಿ ನಡೆಸುವುದರ ಜೊತೆಗೆ ಉತ್ತಮ ಆಲಿಸುವಿಕೆ ಹಾಗೂ ಸಂವಹನ ಸಾಮರ್ಥ್ಯವನ್ನು ಮೈಗೂಡಿಸಿಕೊಳ್ಳಬೇಕು. ತಾಂತ್ರಿಕ ಜ್ಞಾನದೊಂದಿಗೆ ಸಂವಹನ ಕೌಶಲ್ಯ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ (ಪ್ರೋಬ್ಲಮ್ ಸಾಲ್ವಿಂಗ್), ತಂಡದೊಂದಿಗೆ ಕೆಲಸ ಮಾಡುವ ಮನೋಭಾವ (ಟೀಮ್ ವರ್ಕ್), ಹೊಂದಾಣಿಕೆ ಹಾಗೂ ಧನಾತ್ಮಕ ಮನೋಭಾವಗಳು ಉತ್ತಮ ಉದ್ಯೋಗ ಮತ್ತು ಯಶಸ್ವಿ ವೃತ್ತಿಜೀವನಕ್ಕೆ ಅತ್ಯಗತ್ಯ ಎಂದು ಭಾರತೀಯ ರಾಸಾಯನಿಕ ಮಂಡಳಿ (ಐಸಿಸಿ)ಯ ರೆಸ್ಪಾಂಸಿಬಲ್ ಕೇರ್‌ನ ಲೆಕ್ಕಪರಿಶೋಧಕ ರಾಜಶೇಖರ ಭಟ್ ಹೇಳಿದರು.


ಸ್ಥಳೀಯ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್ ಹಾಗೂ ಐಕ್ಯೂಎಸಿ (IQAC) ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಆರ್ ಯು ರೆಡಿ ಫಾರ್ ಇಂಡಸ್ಟ್ರಿ?’ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಎಸ್. ಅವರು, "ಕೈಗಾರಿಕಾ ಕ್ಷೇತ್ರಕ್ಕೆ ಅಗತ್ಯವಿರುವ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ತರಗತಿಯಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅನ್ವಯಿಸುವುದು ಮತ್ತು ಉದ್ಯೋಗ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದೇ ಇದರ ಮುಖ್ಯ ಉದ್ದೇಶ" ಎಂದರು. ವೇದಿಕೆಯಲ್ಲಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ. ಉಪಸ್ಥಿತರಿದ್ದರು.


ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ನಿವೇದಿತಾ ಎನ್.ಬಿ ಸ್ವಾಗತಿಸಿದರು. ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ದಿವ್ಯ ವಂದಿಸಿ, ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಅವನಿ ಕೆ. ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top