ಬಂಟ್ವಾಳ: ವಿಕಸಿತ ಬಂಟ್ವಾಳದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ NH 73 ವ್ಯಾಪ್ತಿಯಲ್ಲಿ ಒಟ್ಟು ₹57.12 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿತು. ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳದ ಅಭಿವೃದ್ಧಿಯ ಹರಿಕಾರ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹಾಗೂ ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರ ಸಮ್ಮುಖದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
₹22.59 ಕೋಟಿ ಅನುದಾನದಲ್ಲಿ ಬಿ.ಸಿ.ರೋಡ್ ಜಂಕ್ಷನ್‌ನಿಂದ ಗಾಣದಪಡ್ಪುವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣ ಹಾಗೂ ₹34.53 ಕೋಟಿ ಅನುದಾನದಲ್ಲಿ ಗಾಣದಪಡ್ಪುವಿನಿಂದ ಪುಂಜಾಲಕಟ್ಟೆಯವರೆಗೆ ರಸ್ತೆ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳಿಂದ ಬಂಟ್ವಾಳದಲ್ಲಿ ರಸ್ತೆ ಸಂಪರ್ಕ, ಸಂಚಾರ ವ್ಯವಸ್ಥೆ ಹಾಗೂ ಮೂಲಸೌಕರ್ಯ ಮತ್ತಷ್ಟು ಸುಧಾರಿಸುವ ನಿರೀಕ್ಷೆಯಿದೆ.

