ಬೆಸೆಂಟ್ ಪ.ಪೂ. ಕಾಲೇಜಿನಲ್ಲಿ ಸಂತ ರವಿದಾಸರ 650ನೇ ಜನ್ಮ ವರ್ಷಾಚರಣೆ

Shreya Hegde
0

ರವಿದಾಸರ ಆದರ್ಶಗಳನ್ನು ಸಮಾಜದಲ್ಲಿ ಅಳವಡಿಸಬೇಕಾಗಿದೆ: ಬಿ.ಕೆ. ಕುಮಾರ್


ಮಂಗಳೂರು: ಅಸಮಾನತೆ, ಅಮಾನವೀಯತೆ, ಜಾತಿ ಮತ್ತು ಸಾಮಾಜಿಕ ಭೇದಭಾವಗಳನ್ನು ಮೀರಿ ಎಲ್ಲರೂ ಸಮಾನರು ಎಂಬ ಸಂದೇಶ ಸಾರಿದ ಗುರು ಸಂತ ರವಿದಾಸರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಹಾಗೂ ಸಮಾಜದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ನಿವೃತ್ತ ಹಿರಿಯ ಪ್ರಬಂಧಕರಾದ ಬಿ.ಕೆ. ಕುಮಾರ್ ಕರೆ ನೀಡಿದ್ದಾರೆ.


ಅವರು ನಗರದ ಬೆಸೆಂಟ್ ರಾಷ್ಟ್ರೀಯ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸಂತ ರವಿದಾಸರ 650ನೇ ಜನ್ಮ ವರ್ಷಾಚರಣೆಯ ಉಪನ್ಯಾಸ ಮಾಲಿಕೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸಾಹಿತ್ಯ ಕೇಂದ್ರದ ವಿಶ್ವಸ್ಥರಾದ ಅರವಿಂದ ಜಿಜೂರು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಭಕ್ತಿ ಹಾಗೂ ಸಂಭ್ರಮದಿಂದ ಉದ್ಘಾಟಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೆಸೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಾಯತ್ರಿ ಶೆಟ್ಟಿ, ಮಹಾನ್ ದಾರ್ಶನಿಕರ ವಿಚಾರಧಾರೆಗಳು ಇಂದಿನ ಯುವ ಜನತೆಗೆ ಮಾರ್ಗದರ್ಶಿಯಾಗಿವೆ ಎಂದರು. ಕೆ.ಆರ್.ಎಂ.ಎಸ್.ಎಸ್. ಮಾಧ್ಯಮ ಪ್ರಮುಖರಾದ ಮಮತಾ ಶೆಟ್ಟಿ ಕಾರ್ಯಕ್ರಮದ ಪ್ರಸ್ತಾವನೆಗೈದರು. ಹಿರಿಯ ಸಮಾಜಶಾಸ್ತ್ರ ಉಪನ್ಯಾಸಕಿ ಹರಿಣಿ ಕಾರ್ಯಕ್ರಮವನ್ನು ಸಂಯೋಜಿಸಿದರು. ಕನ್ನಡ ಉಪನ್ಯಾಸಕಿ ಸುಶೀಲಾ ನಿರೂಪಿಸಿ, ವಂದಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top