ಭಜನಾ ಕಮ್ಮಟ 6ನೇ ದಿನ: ಶಂಕರ ಶ್ಯಾನಭಾಗ್ ಅವರಿಂದ ತರಬೇತಿ

Shreya Hegde
0


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.03, ಶನಿವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟದ ಆರನೇ ದಿನದ ಅಂಗವಾಗಿ ಶಿಬಿರದಲ್ಲಿ ಖ್ಯಾತ ಗಾಯಕ ಶಂಕರ ಶ್ಯಾನಭಾಗ್ ಬೆಂಗಳೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದ್ದು, 'ಮೂಲೋಕದಯ್ಯಾ ದೇವಾನುಸಯ್ಯಾ' ದಾಸ ಕೀರ್ತನೆಯ 'ದಾಸನ ಮಾಡಿಕೊ ಎನ್ನ' ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.


ಈ ಸಂದರ್ಭದಲ್ಲಿ ಭಜನಾ ಕಮ್ಮಟ ಪರಿಷತ್ ನ ಉಪಾಧ್ಯಕ್ಷೆ ಡಾ॥ ಹೇಮಾವತಿ ಅಮ್ಮನವರು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳು, ಉಜಿರೆ ಇದರ  ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀ ಮಹಾಲಕ್ಷ್ಮಿ ಸೇವಾ ಪ್ರತಿಷ್ಠಾನ, ಶ್ರೀ ಧಾಮ, ಮಾಣಿಲ ಇಲ್ಲಿನ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಹಿರಿಯ ಮುತ್ಸದ್ಧಿ ಭುಜಬಲಿ, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top