ಚೇತನ ಕಾಲೇಜಿನ ವಿದ್ಯಾರ್ಥಿನಿ ಸಂಜನಾ ಟಿ. ಹಾವನೂರಗೆ ಕರ್ನಾಟಕ ವಿವಿ 8ನೇ ರ‍್ಯಾಂಕ್

Upayuktha
0

 



ಹುಬ್ಬಳ್ಳಿ: ಚೇತನ ಕಾಲೇಜ್ ಆಫ್ ಕಾಮರ್ಸ್, ಬಿಬಿಎ ಮತ್ತು ಬಿಸಿಎ, ಹುಬ್ಬಳ್ಳಿ ಕಾಲೇಜಿನ ಬಿಕಾಂ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸಂಜನಾ ಟಿ. ಹಾವನೂರ ಅವರು 2022–2025ನೇ ಸಾಲಿನ ಬಿಕಾಂ ಪದವಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಮಟ್ಟದಲ್ಲಿ 8ನೇ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.


ವಿದ್ಯಾರ್ಥಿನಿಯ ಈ ಶೈಕ್ಷಣಿಕ ಸಾಧನೆಯು ಅವರ ಪರಿಶ್ರಮ, ನಿರಂತರ ಅಧ್ಯಯನ, ಶಿಸ್ತು ಹಾಗೂ ಬೋಧಕ ವರ್ಗದ ಮಾರ್ಗದರ್ಶನಕ್ಕೆ ಸಾಕ್ಷಿಯಾಗಿದೆ. ಈ ಸಾಧನೆಯ ಮೂಲಕ ಅವರು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದ್ದಾರೆ.


ಈ ಶ್ಲಾಘನೀಯ ಸಾಧನೆಗೆ ಚೇತನ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕುಮಾರಿ ಸಂಜನಾ ಟಿ. ಹಾವನೂರ ಅವರನ್ನು ಅಭಿನಂದಿಸಿ, ಅವರ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.


ಮುಂದಿನ ದಿನಗಳಲ್ಲಿಯೂ ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಹಾಗೂ ಜೀವನದಲ್ಲಿ ಯಶಸ್ಸು ಗಳಿಸಲಿ ಎಂದು ಸಂಸ್ಥೆಯ ಆಡಳಿತ ಮಂಡಳಿ ಮತ್ತು ಸಮಸ್ತ ಸಿಬ್ಬಂದಿ ಹಾರೈಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top