ಜಿಲ್ಲಾ ಮಟ್ಟದ ಈಜು ಸ್ಪರ್ಧೆ: ಶ್ರೀರಾಮ ಪಿಯು ಕಾಲೇಜಿನ ಅನರ್ಘ್ಯಗೆ 3 ಚಿನ್ನದ ಪದಕ, ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0


ಬಂಟ್ವಾಳ: ಮಂಗಳೂರಿನ ಮಂಗಳ ಈಜು ಕೊಳದಲ್ಲಿ ಶುಕ್ರವಾರ (ಅಕ್ಟೋಬರ್ 09) ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ವತಿಯಿಂದ ಆಯೋಜಿಸಲಾಗಿದ್ದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯ ಹುಡುಗಿಯರ ವಿಭಾಗದಲ್ಲಿ ಕಲ್ಲಡ್ಕದ ಶ್ರೀರಾಮ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಅನರ್ಘ್ಯ ಎ. ಆರ್. ಅತ್ಯುತ್ತಮ ಸಾಧನೆಗೈದಿದ್ದಾರೆ.


ಅನರ್ಘ್ಯ ಇವರು ಸ್ಪರ್ಧೆಯ 200 ಮೀಟರ್ ಇಂಡಿವಿಜುವಲ್ ಮೆಡ್ಲೆ, 200 ಮೀಟರ್ ಬ್ಯಾಕ್ ಸ್ಟ್ರೋಕ್ ಹಾಗೂ 400 ಮೀಟರ್ ಫ್ರೀಸ್ಟೈಲ್ ವಿಭಾಗಗಳಲ್ಲಿ ಮೂರು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡು, ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.


ಇವರು ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ. ಕೆ. ನಾಯ್ಕ್, ಅಶೋಕ್ ದೇವಾಡಿಗ ಹಾಗೂ ಉಮೇಶ್ ವಿಟ್ಲ ಇವರ ಶಿಷ್ಯೆಯಾಗಿದ್ದು, ಪ್ರಸ್ತುತ ಮಂಗಳೂರಿನ ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರರಾದ ಲೋಕರಾಜ್ ವಿಟ್ಲ ಹಾಗೂ ತರಬೇತುದಾರರಾದ ಸಂಜಯ್ ಮತ್ತು ಗಗನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.


ಸಾಧಕಿ ಅನರ್ಘ್ಯ ಎ. ಆರ್. ಅವರು ಅಶೋಕ್ ಕುಮಾರ್ ಬರಿಮಾರು ಹಾಗೂ ರೋಹಿಣಿ ಬಿ. ದಂಪತಿಯ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top