ಬೆಳ್ತಂಗಡಿ: ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರು ಆಯೋಜಿಸಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ನಡೆಸಿದ ಕಾಲೇಜು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ದೀಕ್ಷಾ ಇವಳು ತೃತೀಯ ಸ್ಥಾನವನ್ನು ಪಡೆದಿರುತ್ತಾಳೆ.
ಮಂಗಳೂರಿನ ಪತ್ತು ಮುಡಿಸೌಧ ಇಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಗದು ಬಹುಮಾನದೊಂದಿಗೆ ಪ್ರಶಸ್ತಿಪತ್ರವನ್ನು ಸ್ವೀಕರಿಸಲಾಯಿತು. ಪ್ರಾಂಶುಪಾಲರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಉಪನ್ಯಾಸಕರ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು.

