ನ. 2ರಂದು ಮಂಗಳೂರಿನಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ, ‘ಸಂಗೀತ ರಸಸಂಜೆ’

Shreya Hegde
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ.) ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನವೆಂಬರ್ 2 ರಂದು (ಸೋಮವಾರ) ನಗರದಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


ನಗರದ ಎಂ.ಜಿ. ರಸ್ತೆಯಲ್ಲಿರುವ ಎಸ್.ಡಿ.ಎಂ. ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ಅಪರಾಹ್ನ 2:00 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಖ್ಯಾತ ತುಳು ಹಾಗೂ ಕನ್ನಡ ವಿದ್ವಾಂಸರಾದ ಪ್ರೊ. ಕೆ. ಚಿನ್ನಪ್ಪ ಗೌಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಮಾಜಿ ಮೇಯರ್ ದಿವಾಕರ ಕದ್ರಿ ಭಾಗವಹಿಸಲಿದ್ದಾರೆ.


ಸಂಜೆ ವೈವಿಧ್ಯಮಯ ಸಂಗೀತ ರಸಸಂಜೆ:

ಸಭಾ ಕಾರ್ಯಕ್ರಮದ ನಂತರ, ಅಪರಾಹ್ನ 3:00 ಗಂಟೆಯಿಂದ ಕಲಾಭಿಮಾನಿಗಳಿಗಾಗಿ ‘ಸಂಗೀತ ರಸಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾನೂನು ಕಾಲೇಜಿನ ಪ್ರಾoಶುಪಾಲರಾದ ಡಾ. ತಾರಾನಾಥ, ಉದ್ಯಮಮಾಡಳಿತ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಾನುಪ್ರಕಾಶ್ ಬಿ. ಈ., ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ಸೀಮಾ ಎಸ್. ಶೆಣೈ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಸ್ವಚ್ಛ ಪರಿಸರ ಪ್ರತಿಷ್ಠಾನದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top