ನವೆಂಬರ್‌ನಲ್ಲಿ ಮಂಗಳೂರಿಗೆ ಹೈಕೋರ್ಟ್ ಜಡ್ಜ್‌ಗಳ ಸಮಿತಿ ಭೇಟಿ: ಬಂಟ್ವಾಳದಲ್ಲಿ ಪೂರ್ವಭಾವಿ ಸಭೆ

Shreya Hegde
0


ಬಂಟ್ವಾಳ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ರಚನೆಯ ಸಾಧ್ಯತೆಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವ ಉದ್ದೇಶದಿಂದ ಹೈಕೋರ್ಟ್‌ನ ಮೂವರು ನ್ಯಾಯಮೂರ್ತಿಗಳ ಸಮಿತಿ ನವೆಂಬರ್‌ನಲ್ಲಿ ಮಂಗಳೂರಿಗೆ ಭೇಟಿ ನೀಡುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆಗಳ ಕುರಿತು ಹೈಕೋರ್ಟ್ ಹೋರಾಟ ಸಮಿತಿಯ ಸಮಾಲೋಚನಾ ಸಭೆ ಬಂಟ್ವಾಳ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು.


ಹೈಕೋರ್ಟ್ ಹೋರಾಟ ಸಮಿತಿಯ ಸಂಚಾಲಕ, ವಿಧಾನ ಪರಿಷತ್ ಸದಸ್ಯ ಹಾಗೂ ನ್ಯಾಯವಾದಿ ಐವನ್ ಡಿ'ಸೋಜ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ನ್ಯಾಯಮೂರ್ತಿಗಳ ಸಮಿತಿಯ ಭೇಟಿಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳು ಹಾಗೂ ಹೈಕೋರ್ಟ್ ಪೀಠ ಸ್ಥಾಪನೆಯ ಬೇಡಿಕೆಯನ್ನು ಪರಿಣಾಮಕಾರಿಯಾಗಿ ಮಂಡಿಸುವ ಕುರಿತು ಚರ್ಚಿಸಲಾಯಿತು.


ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರೂ ಆಗಿರುವ ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಎಂ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೋರಾಟ ಸಮಿತಿಯ ಸದಸ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ನ್ಯಾಯವಾದಿ ಮೋನಪ್ಪ ಭಂಡಾರಿ, ಎಂ.ಪಿ. ನೊರೊನ್ಹಾ, ಎಚ್.ವಿ. ರಾಘವೇಂದ್ರ, ಮಂಗಳೂರು ವಕೀಲರ ಸಂಘದ ಕಾರ್ಯದರ್ಶಿ ಬಿ.ಪಿ. ಗೌತಮ್, ಉಪಾಧ್ಯಕ್ಷ ಪ್ರವೀಣ್ ಕುಮಾರ್ ಆದ್ಯಪಾಡಿ ಸೇರಿದಂತೆ ಸಮಿತಿಯ ಸದಸ್ಯರು ಭಾಗವಹಿಸಿದ್ದರು.


ಬಂಟ್ವಾಳ ವಕೀಲರ ಸಂಘದ ಹಿರಿಯ ಹಾಗೂ ಕಿರಿಯ ವಕೀಲರು ಸಭೆಯಲ್ಲಿ ಉಪಸ್ಥಿತರಿದ್ದು, ಹೈಕೋರ್ಟ್ ಪೀಠ ಸ್ಥಾಪನೆಯ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಅಭಿಪ್ರಾಯಗಳನ್ನು ಹಂಚಿಕೊಂಡರು. ಬಂಟ್ವಾಳ ವಕೀಲರ ಸಂಘದ ಕಾರ್ಯದರ್ಶಿ ಕೆ.ಎನ್. ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top