ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ನೂತನ 250 ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

Shreya Hegde
0


​ಮಂಗಳೂರು: ಗುಣಮಟ್ಟದ ವೈದ್ಯಕೀಯ ಶಿಕ್ಷಣ ನೀಡುವುದು ಹಾಗೂ ಸಮಾಜಸೇವೆ ಸಲ್ಲಿಸುವುದು ನಮ್ಮ ಸಂಸ್ಥೆಯ ಮೂಲ ಧ್ಯೇಯ, ಉದ್ದೇಶವಾಗಿದೆ. ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ವೃತ್ತಿ ಜೀವನವನ್ನು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದಿಂದ ರೂಪಿಸಿಕೊಳ್ಳಬೇಕು ಎಂದು ಕಣಚೂರು ಇಸ್ಲಾಮಿಕ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಕರೆ ನೀಡಿದ್ದಾರೆ.


ದಿ.7.10.2026ರಂದು ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ 2026ರ ಪ್ರಥಮ ಸಾಲಿನ 250 ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಿಗಾಗಿ ಸಾಂಪ್ರದಾಯಿಕ ಓರಿಯೆಂಟೇಶನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ವೈಯಕ್ತಿಕ ಭದ್ರತೆ ಹಾಗೂ ಸರ್ವತೋಮುಖ ಬೆಳವಣಿಗೆಗೆ ಸಂಸ್ಥೆ ಸಂಪೂರ್ಣ ಬದ್ಧವಾಗಿದೆ ಎಂದು ಪೋಷಕರಿಗೆ ಧೈರ್ಯ ತುಂಬಿದರು. 


ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಶೈಕ್ಷಣಿಕ ಪಯಣ, ಕಾಲೇಜಿನ ವಾತಾವರಣ, ನಿಯಮಾವಳಿಗಳು ಹಾಗೂ ಮೂಲಸೌಕರ್ಯಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹಿಮಾನ್ ಮಾತನಾಡಿ, ಕಾಲೇಜಿನ ಮೂಲಸೌಕರ್ಯ, ಶಿಸ್ತು, ಹಾಸ್ಟೆಲ್ ಸೌಲಭ್ಯಗಳು ಮತ್ತು ಭದ್ರತಾ ವ್ಯವಸ್ಥೆಗಳ ಕುರಿತು ಸಮಗ್ರ ಮಾಹಿತಿ ನೀಡಿ, ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಆಡಳಿತ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸಲಹೆ ನೀಡಿದರು.


ಸಂಸ್ಥೆಯ ಡೀನ್ ಡಾ. ಶಹನವಾಜ್ ಮಣಿಪಾಡಿ ಸ್ವಾಗತಿಸಿ, ಕಾಲೇಜು ಆವರಣದಲ್ಲಿ ರ್‍ಯಾಗಿಂಗ್, ಗುಂಪು ಹೊಡೆದಾಟ, ಮಾದಕ ವಸ್ತುಗಳ ಸೇವನೆ ಹಾಗೂ ಅಶಿಸ್ತಿನ ವರ್ತನೆಗೆ ಸಂಪೂರ್ಣ ನಿಷೇಧವಿದ್ದು, ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಲಾಗುತ್ತಿದೆ ಎಂದು ಸೂಚಿಸಿದರು. ಕಣಚೂರು ಆರೋಗ್ಯ ವಿಜ್ಞಾನ ಸಲಹಾ ಸಮಿತಿ ಅಧ್ಯಕ್ಷ ಡಾ. ಮೊಹಮ್ಮದ್ ಇಸ್ಮಾಯಿಲ್ ಪ್ರೇರಣಾದಾಯಕ ಭಾಷಣ ಮಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಎಸ್. ಮೋನಿಸ್, ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅಂಜನ್ ಕುಮಾರ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಕೀನಾ ಹಾಗೂ ಇರ್ಫಾನ್ ನಿರೂಪಿಸಿದರು. ಅಂಗ ವಿಚ್ಛೇದನ ತಂತ್ರಶಾಸ್ತ ವಿಭಾಗದ ಮುಖ್ಯಸ್ಥ ಡಾ. ರೋಷನ್ ವಂದಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top