ಮಯಂಗರ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಉಪಸಮಿತಿ ಸಭೆ

Shreya Hegde
0


ಕಾಸರಗೋಡು, ಚೆರ್ಕಳ: ಬೇವಿಂಜೆ ಮಯಂಗರ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 18‌ ರಿಂದ 27ರವರೆಗೆ ನಡೆಯಲಿರುವ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಉಪಸಮಿತಿ ಸಭೆ ನಡೆಯಿತು. ಬ್ರಹ್ಮಕಲಶೋತ್ಸವವನ್ನು ಸುಸೂತ್ರವಾಗಿ ಹಾಗೂ ಭಕ್ತಿಪೂರ್ವಕವಾಗಿ ನಡೆಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳ ಸಮನ್ವಯ, ಕಾರ್ಯಯೋಜನೆ ಹಾಗೂ ಇದುವರೆಗೆ ನಡೆದಿರುವ ಸಿದ್ಧತೆಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು.


ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಗಿರಿಧರನ್ ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆಯಲಿರುವ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸಮಾರಂಭಗಳ ಕುರಿತು ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗೋವಿಂದ ಬಳ್ಳಮೂಲೆ ಅವರು ಹಣಕಾಸು, ಪ್ರಚಾರ, ಸಾಂಸ್ಕೃತಿಕ ಹಾಗೂ ಸ್ಥಳ ಸಜ್ಜೀಕರಣ ಸೇರಿದಂತೆ ವಿವಿಧ ಉಪಸಮಿತಿಗಳ ಕಾರ್ಯಪ್ರಗತಿ ಮತ್ತು ಮುಂದಿನ ಕಾರ್ಯಯೋಜನೆಗಳ ಕುರಿತು ವಿವರಿಸಿದರು.


ಬಿ. ಕೆ. ವಿಜಯನ್ ಅವರು ಉತ್ಸವದ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಿದರು. ಕ್ಷೇತ್ರದ ಆಡಳಿತಾಧಿಕಾರಿಗಳಾದ ಬಿ. ವಿ. ಕಕ್ಕಿಲ್ಲಾಯ, ವಿಷ್ಣುಮೂರ್ತಿ ಕಕ್ಕಿಲ್ಲಾಯ ಹಾಗೂ ಗೋಪಾಲಕೃಷ್ಣ ಕಕ್ಕಿಲ್ಲಾಯ ಉಪಸ್ಥಿತರಿದ್ದು, ಕಾರ್ಯಕ್ರಮಗಳ ವ್ಯವಸ್ಥಿತ ನಿರ್ವಹಣೆಗೆ ಅಗತ್ಯ ಮಾರ್ಗದರ್ಶನ ನೀಡಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಸುನಿಲ್ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ರಿಜೇಶ್ ಕಲ್ಲುವಳ ಹಾಗೂ ಸ್ಥಳ ಸಜ್ಜೀಕರಣ ಸಮಿತಿ ಸಂಚಾಲಕ ಶಶಿಧರ ನಾಯಕ್ ಅವರು ತಮ್ಮ ತಮ್ಮ ಸಮಿತಿಗಳ ಕಾರ್ಯರೂಪರೇಖೆಯನ್ನು ಸಭೆಯಲ್ಲಿ ಮಂಡಿಸಿದರು. ಕಾರ್ಯದರ್ಶಿ ರವಿ ಬೇವಿಂಜೆ ವಂದಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top