MRPL ಅಪಘಾತ: ಮೃತ ನೌಕರನ ಕುಟುಂಬಕ್ಕೆ ಸಕಾಲದಲ್ಲಿ EPFO ಸೌಲಭ್ಯ ಹಸ್ತಾಂತರ

Shreya Hegde
0


ಮಂಗಳೂರು: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಲೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿದೆ.


ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಲೇಮುಗಳನ್ನು ಇತ್ಯರ್ಥಪಡಿಸಲಾಗಿದೆ. ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ-1995 ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನು ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.


ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಜಾರಿ ಅಧಿಕಾರಿಯಾದ ಶ್ರೀಮತಿ ಅನಿತಾ ಆರ್. ಅವರೊಂದಿಗೆ 09.10.2026 ರಂದು ದಿವಂಗತ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.


ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಿಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ. EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top