ಉಜಿರೆ: ಎನ್ ಎಸ್ ಎಸ್ ವತಿಯಿಂದ ಆತ್ಮರಕ್ಷಣಾ ತರಬೇತಿ ಕಾರ್ಯಕ್ರಮ

Shreya Hegde
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಪೂಜ್ಯ  ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತ್ಯೋತ್ಸವದ ಪ್ರಯುಕ್ತ ಆತ್ಮ ರಕ್ಷಣಾ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 6 ಮಂಗಳವಾರ ಕಾಲೇಜಿನ ಸಮ್ಯಗ್ದರ್ಶನದಲ್ಲಿ ಆಯೋಜಿಸಲಾಯಿತು.


ಕಾರ್ಯಕ್ರಮದಲ್ಲಿ ಶಿಹಾನ್ ಶೈಮು ರಹ್ಮಾನ್, 3ನೇ ಡಿ ಎ ಯಾನ್, ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಇವರು  ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆಯ ವಿವಿಧ ತಂತ್ರಗಳನ್ನು ಪ್ರತ್ಯಕ್ಷಿಕೆಯ ಮೂಲಕ ತಿಳಿಸಿದರು. ಅಪಾಯದ ಸಂದರ್ಭದಲ್ಲಿ ಆತ್ಮವಿಶ್ವಾಸದಿಂದ ಪರಿಸ್ಥಿತಿಯನ್ನು ಎದುರಿಸುವುದು, ದೈಹಿಕ ಸುರಕ್ಷತೆ ಹಾಗೂ ಆತ್ಮರಕ್ಷಣೆಯ ಮಹತ್ವವನ್ನು ವಿವರಿಸಿದರು.ಕರಾಟೆಯ ವಿವಿಧ ತಂತ್ರಗಳು, ಆತ್ಮರಕ್ಷಣಾ ವಿಧಾನಗಳು ಹಾಗೂ ಅವುಗಳನ್ನು ಅಗತ್ಯ ಸಂದರ್ಭಗಳಲ್ಲಿ ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಪ್ರಾಯೋಗಿಕವಾಗಿ ಹೇಳಿಕೊಟ್ಟರು. ವಿದ್ಯಾರ್ಥಿಗಳಿಗೂ ವಿವಿಧ ಕರಾಟೆ ತಂತ್ರಗಳನ್ನು ಅಭ್ಯಾಸ ಮಾಡಿಸಿದರು. ತರಬೇತಿಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಧೈರ್ಯ ಹಾಗೂ ಸುರಕ್ಷತೆಯ  ಅರಿವು ಮೂಡಿಸಲು ಸಹಕಾರಿಯಾಯಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ., ಯೋಜನಾಧಿಕಾರಿಗಳಾದ ಡಾ. ಮಾಲಿನಿ ಅಂಚನ್ ಮತ್ತು ಡಾ. ಸುಧೀರ್ ಕೆ.ವಿ., ಹಾಗೂ ಏನ್ ಎಸ್ ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸ್ವಯಂಸೇವಕಿ ಪೂಜಾಶ್ರೀ ಸ್ವಾಗತಿಸಿ, ಅಕ್ಷಯ್ ವಂದಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top