ಎನ್ ಎಸ್ ಎಸ್ ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆಯಾದ ವಿವಿಧ ಸ್ಪರ್ಧೆಗಳು

Shreya Hegde
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ, ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ  ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಧಂತೋತ್ಸವದ ಪ್ರಯುಕ್ತ ಹಲವು ಸ್ಪರ್ಧೆಗಳನ್ನು ವಿದ್ಯಾರ್ಥಿಗಳಿಗಾಗಿ ಆ ಕ್ಟೋಬರ್ 8 ಗುರುವಾರದಂದು ಕಾಲೇಜಿನಲ್ಲಿ ಆಯೋಜಿಸಲಾಯಿತು.


ಕಾರ್ಯಕ್ರಮದ ಅಂಗವಾಗಿ ಕ್ಲೇ ಮಾಡೆಲಿಂಗ್, ಚಿತ್ರಕವನ, ಚಿತ್ರಕಲೆ, ಛಾಯಾಗ್ರಹಣ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಮತ್ತು ಕಿರುಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಸೃಜನಶೀಲತೆ, ಕಲಾತ್ಮಕತೆ ಹಾಗೂ ವಿಚಾರ ಮಂಡನೆಯ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ., ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಡಾ. ಮಾಲಿನಿ ಅಂಚನ್ ಹಾಗೂ ಡಾ. ಸುಧೀರ್ ಕೆ.ವಿ. ಹಾಗೂ ಸ್ವಯಂಸೇವಕರು ಸಹಕರಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top