ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ: ಪವಿತ್ರಾ

Shreya Hegde
0


ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.


ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್; ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ- ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.


ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂ.ಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂ.ಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top