ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ 25 ವರ್ಷಗಳ ನಿರಂತರ ಜನಸೇವೆಯ ಸವಿ ನೆನಪಿಗಾಗಿ ಹಮ್ಮಿಕೊಳ್ಳಲಾಗಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಭಾಗವಾಗಿ, ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವ ಸಮರ್ಪಿಸುವ ‘ಅಂಗಳದ ಉತ್ಸವ’ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, "ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಇಡೀ ಜೀವನವನ್ನು ದೇಶಕ್ಕಾಗಿ ಸಮರ್ಪಿಸಿಕೊಂಡಿದ್ದಾರೆ. ಅವರ ಸರಳ, ನಿಷ್ಠುರ ಮತ್ತು ಜನಪರ ಬದುಕು ನಮ್ಮಂತಹ ಪ್ರತಿಯೊಬ್ಬ ಕಾರ್ಯಕರ್ತರಿಗೂ ದೊಡ್ಡ ಆದರ್ಶವಾಗಿದೆ. ಮೋದಿಜೀಯವರ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಸೇವಾ ಕಾರ್ಯಗಳು ಅವರಿಗೆ ದೇಶದ ಜನಸೇವೆಗೆ ಇನ್ನಷ್ಟು ಹೆಚ್ಚಿನ ಶಕ್ತಿ ನೀಡಲಿ" ಎಂದು ಅಭಿಪ್ರಾಯಪಟ್ಟರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಮತ್ತು ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ನಿಂತು ಶ್ರಮಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆಯನ್ನು ಈ ವೇಳೆ ವಿಶೇಷವಾಗಿ ಸ್ಮರಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಲಲ್ಲೇಶ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್, ಮಂಡಲ ಯುವ ಮೋರ್ಚಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ದಕ್ಷಿಣ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ನಿಡ್ಡೆಲ್, ಮಂಡಲ ಉಪಾಧ್ಯಕ್ಷ ಕಿರಣ್ ರೈ, ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಸುಕೇಶ್, ಶಕ್ತಿ ಕೇಂದ್ರ ಅಧ್ಯಕ್ಷ ಸುರೇಶ್ ಆಚಾರ್, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಶಬರಿ ಶೆಟ್ಟಿ, ಮಾನಸ ರೈ, ಮಂಡಲ ಕಾರ್ಯದರ್ಶಿ ಸುಮತಿ ಚಂದ್ರಶೇಖರ್, ಕ್ಲಬ್ ಅಧ್ಯಕ್ಷ ಜಿತೇಶ್ ಹಾಗೂ ವಿವಿಧ ವಾರ್ಡ್‌ಗಳ ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

