ರುಡ್‌ಸೆಟ್‌ ತರಬೇತಿಗಾರರಿಗೆ ಡಾ. ಹೆಗ್ಗಡೆಯವರಿಂದ ಮಾರ್ಗದರ್ಶನ

Shreya Hegde
0



ಉಜಿರೆ: ರುಡ್‌ಸೆಟ್‌ ಸಂಸ್ಥೆಯಲ್ಲಿ ನಡೆಯುತ್ತಿರುವ ಮಹಿಳಾ ಟೈಲರಿಂಗ್ ತರಬೇತಿ ಶಿಬಿರದ ಶಿಬಿರಾರ್ಥಿಗಳು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಮಾರ್ಗದರ್ಶನ ಪಡೆದರು.


ಈ ಸಂದರ್ಭದಲ್ಲಿ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದ ಡಾ. ಹೆಗ್ಗಡೆಯವರು, ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ, ತರಬೇತಿಯ ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವಂತೆ ಪ್ರೇರೇಪಿಸಿದರು. ಶಿಬಿರಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯಕ್, ಹಿರಿಯ ಉಪನ್ಯಾಸಕ ಕರುಣಾಕರ ಜೈನ್, ಅತಿಥಿ ಉಪನ್ಯಾಸಕಿ ರಶ್ಮಿ ರಾಘವೇಂದ್ರ ಹಾಗೂ ಸುರೇಶ ಗೌಡ ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top