ಎಸ್‌ಡಿಎಂ ಬಿ.ಎಡ್ - ಡಿ.ಎಡ್. ಕಾಲೇಜು ಉಜಿರೆ: ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ

Shreya Hegde
0

 ‌                                         


ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಮತ್ತು ಡಿ.ಎಡ್. ಸಂಸ್ಥೆಯಲ್ಲಿ “ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ” ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಮಂಜು ಆರ್ ವಹಿಸಿ ಮಾತನಾಡಿ ಗಾಂಧೀಜಿಯವರು ಅಹಿಂಸಾ ಮಾರ್ಗದಲ್ಲಿಯೇ ನಮ್ಮ ದೇಶಕ್ಕೆ ಸ್ವಾತಂತ್ರಪಡೆದು ದಕ್ಷಿಣ ಆಫ್ರಿಕಾದಲ್ಲಿ ವರ್ಣಬೇಧ ನೀತಿಯ ವಿರುದ್ಧ ಹೋರಾಟ ನಡೆಸಿ ಮಹಾತ್ಮ ಎಸಿಕೊಂಡವರು. ರಾಮರಾಜ್ಯದ ಕನಸ್ಸನ್ನು ಕಂಡವರು, ತಮ್ಮ ಜೀವಿತಾವಧಿಯಲ್ಲಿ ಸರಳ ಜೀವನ ಮತ್ತು ಆದರ್ಶಗಳನ್ನು ಪಾಲಿಸಿದ ಮಹಾನ್ ಚೇತನ. ಅಲ್ಲದೇ ಜನರಲ್ಲಿ ಸ್ವಾವಲಂಬನೆ ಹಾಗೂ ಸ್ವದೇಶಿ ವಸ್ತುಗಳನ್ನು ಬಳಸುವಂತೆ ಪ್ರೇರೇಪಿಸಿ ತಮ್ಮ ಆತ್ಮಕಥನದಲ್ಲಿ ತಾವು ಕಂಡ ಸತ್ಯದ ಘಟನೆಗಳನ್ನು ಪ್ರಾಮಾಣಿಕವಾಗಿ ಬರವಣಿಗೆಯ ಮೂಲಕ ವ್ಯಕ್ತಪಡಿಸಿ ಮಾದರಿ ವ್ಯಕ್ತಿಯಾಗಿದ್ದಾರೆ.


ಲಾಲ್ ಬಹದ್ದೂರ್ ಶಾಸ್ತ್ರೀಯವರು ದೇಶದ 2ನೇ ಪ್ರಧಾನಮಂತ್ರಿಗಳಾಗಿ ಅನನ್ಯ ಸೇವೆ ಸಲ್ಲಿಸಿ ತಮ್ಮ ಆಡಳಿತಾವಧಿಯಲ್ಲಿ ಯಾವುದೇ ಚ್ಯುತಿ ಬರದ ಹಾಗೆ ತೊಡಗಿಸಿಕೊಂಡ ಪ್ರಾಮಾಣಿಕ ಹಾಗೂ ದಕ್ಷ ಆಡಳಿತಗಾರ ಎಂದು ಅಭಿಪ್ರಾಯಪಟ್ಟರು. ಪ್ರಶಿಕ್ಷಣಾರ್ಥಿಗಳಾದ ಆಕಾಶ್ ಸಿ ಎ ಮತ್ತು ರಂಝೀನಾ ಗಾಂಧಿಜಯಂತಿ, ಲಾಲ್ ಬಹದ್ದೂರು ಶಾಸ್ತ್ರಿ ಜಯಂತಿಯ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಹಾಯಕ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಪ್ರಶಿಕ್ಷಣಾರ್ಥಿಗಳೆಲ್ಲರೂ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕಾಲೇಜಿನ ಆವರಣ ಹಾಗೂ ಸಾರ್ವಜನಿಕ ರಸ್ತೆ ಮಾರ್ಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಳ್ಳಲಾಗಿತ್ತು.


ಪ್ರಶಿಕ್ಷಣಾರ್ಥಿಗಳಾದ ಚೈತ್ರಶ್ರೀ ವಿ ಸ್ವಾಗತಿಸಿ, ಕವಿತಾ ಅತಿಥಿಗಳನ್ನು ಪರಿಚಯಿಸಿ, ಶಿಫಾನ ವಂದಿಸಿ ವೀಕ್ಷಿತಾ ಮತ್ತು ಹರ್ಷಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top