ಬಿ.ಎಡ್. ಹಾಗೂ ಡಿ.ಎಡ್. SDM ಉಜಿರೆ: ರಕ್ಷಣಾ ಕ್ಷೇತ್ರ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ

Shreya Hegde
0



ಉಜಿರೆ:‌ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನಲ್ಲಿ ಪರಮ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59 ನೇ ವರ್ಧಂತ್ಯುತ್ಸವದ ಪ್ರಯುಕ್ತ ರಕ್ಷಣಾ ಕ್ಷೇತ್ರ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವು ನಡೆಯಿತು.


ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಹಾಯಕ ಶಿಕ್ಷಕರಾದ ದೀಕ್ಷಿತ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ರಕ್ಷಣಾ ಕ್ಷೇತ್ರದಲ್ಲಿನ ವಿವಿಧ ಉದ್ಯೋಗಾವಕಾಶಗಳು, ಸೇನೆಗೆ ಸೇರುವ ವಿಧಾನ, ಅಗತ್ಯ ಅರ್ಹತೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಇಸಾಕ್ ವಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ನಿರಂತರ ಅಧ್ಯಯನ, ಶಿಸ್ತು, ಸಮಯ ನಿರ್ವಹಣೆ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅಗತ್ಯವೆಂದು ತಿಳಿಸಿದರು.


ವೇದಿಕೆಯಲ್ಲಿ ಸರಕಾರಿ ಪ್ರೌಢಶಾಲೆ ಬೊಗಸೆ, ಚಿಕ್ಕಮಗಳೂರು ಇಲ್ಲಿನ ಸಹಾಯಕ ಶಿಕ್ಷಕರಾದ ಮೋಹನ್ ಕುಮಾರ್ ವಿ, ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಿದ್ಯಾರ್ಥಿ ನಾಯಕಿಯರಾದ ಶ್ರವಣ ಮಹಾಪುರುಷ ಮತ್ತು ದೀಪಿಕಾ ಉಪಸ್ಥಿತರಿದ್ದರು. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಎಲ್ಲಾ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರಕ್ಷಣಾ ಕ್ಷೇತ್ರ ಮತ್ತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಭವಿಷ್ಯದ ವೃತ್ತಿ ಆಯ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಯಿತು. ಪ್ರಶಿಕ್ಷಣಾರ್ಥಿಗಳಾದ ಧನುಶ್ರೀ ಸ್ವಾಗತಿಸಿ, ಕವಿತಾ ವಂದಿಸಿ, ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top