ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

Shreya Hegde
0


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅ.2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿ ದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು. ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.


ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು. ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.


ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ  ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top