ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Upayuktha
0

 


ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು   ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ  ನಡೆದ  'ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 - 27'  ಟೇಕ್ವಾಂಡೋಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್  ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧದಂಪತಿಗಳ ಪುತ್ರ. ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.

       

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ  ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top