ಮಂಗಳೂರು: ಕೆನರಾ ಶಾಲೆ, ಡೊಂಗರಕೇರಿಯ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾನ್ವಿ ಮಲ್ಯಾ ಅವರು 2026–27ನೇ ಶೈಕ್ಷಣಿಕ ಸಾಲಿನ ಕರ್ನಾಟಕ ರಾಜ್ಯ ಶಾಲಾ ಕ್ರೀಡಾ ಒಕ್ಕೂಟದ (SGFI) 14 ವರ್ಷದೊಳಗಿನ ವಯೋಮಿತಿಯ ಬಾಲಕಿಯರ ರಾಜ್ಯಮಟ್ಟದ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಅಕ್ಟೋಬರ್ 15ರಿಂದ 17ರವರೆಗೆ ಕೊಪ್ಪಳದ MMDRSನಲ್ಲಿ ನಡೆದ ಈ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಜಾನ್ವಿ ಅವರು ಒಟ್ಟು 9 ಸುತ್ತುಗಳಲ್ಲಿ 8.5 ಅಂಕಗಳನ್ನು ಗಳಿಸಿ ಅಗ್ರಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಾನ್ವಿ ಅವರು ಶ್ರೀ ಪ್ರಸನ್ನ ಮಲ್ಯ ಮತ್ತು ಶ್ರೀಮತಿ ಪವಿತ್ರ ಮಲ್ಯ ದಂಪತಿಯ ಪುತ್ರಿ. ಕುಮಾರಿ ಜಾನ್ವಿ ಅವರ ಈ ಗಮನಾರ್ಹ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಕೆನರಾ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂಬರುವ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಿ, ಇನ್ನೂ ಹೆಚ್ಚಿನ ಯಶಸ್ಸನ್ನು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.

