ಉಡುಪಿ: ಕಲಾ ಪ್ರತಿಭೋತ್ಸವಕ್ಕೆ ಅರ್ಜಿ ಆಹ್ವಾನ

Upayuktha
0


ಉಡುಪಿ: ಮಕ್ಕಳು ಮತ್ತು ಯುವ ಜನರಲ್ಲಿರುವ ಕಲಾ ಪ್ರತಿಭೆ ಗುರುತಿಸಿ ಉತ್ತೇಜನ ನೀಡಲು ಮತ್ತು ಕಲಾ ನೈಪುಣ್ಯ ವೃದ್ಧಿಗೆ ಪ್ರೋತ್ಸಾಹಿಸಲು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾ ಪ್ರತಿಭೋತ್ಸವ ಏರ್ಪಡಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ.


ಬಾಲಪ್ರತಿಭೆ, ಕಿಶೋರ ಪ್ರತಿಭೆ, ಯುವಪ್ರತಿಭೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದವರನ್ನು ವಲಯ ಮಟ್ಟಕ್ಕೆ ಹಾಗೂ ವಲಯ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು.ಜಿಲ್ಲಾ ಮತ್ತು ವಲಯಮಟ್ಟದಲ್ಲಿಯಾವುದೇ ನಗದು ಪುರಸ್ಕಾರ ಇರುವುದಿಲ್ಲ. ವಲಯ ಮತ್ತುರಾಜ್ಯಮಟ್ಟದಲ್ಲಿ ಭಾಗವಹಿಸುವವರಿಗೆ ಪ್ರಯಾಣ ವೆಚ್ಚ ನೀಡಲಾಗುವುದು. ಬಾಲಪ್ರತಿಭೆ 8ರಿಂದ 14 ವರ್ಷ, ಕಿಶೋರ ಪ್ರತಿಭೆ 14ರಿಂದ 18 ವರ್ಷ, ಯುವಪ್ರತಿಭೆ 18 ವರ್ಷ ಹಾಗೂ 30 ವರ್ಷಕ್ಕಿಂತ ಕಡಿಮೆ ಇರಬೇಕು.


ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜನಪದಗೀತೆ, ಹಿಂದೂಸ್ತಾನಿ ವಾದ್ಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಆಶುಭಾಷಣ, ಸಮೂಹ ಸ್ಪರ್ಧೆಯಾಗಿ ನಾಟಕ ಮತ್ತುಜನಪದ ನೃತ್ಯಇರಲಿದೆ. ವಿದ್ಯಾರ್ಥಿಗಳು ವಯೋಮಿತಿ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಇತರರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಅಥವಾ ಸಕ್ಷಮ ಪ್ರಾಧಿಕಾರ ನೀಡುವ ಜನ್ಮ ಪ್ರಮಾಣ ಪತ್ರವನ್ನುಅರ್ಜಿಯೊಂದಿಗೆ ಲಗತ್ತಿಸಬೇಕು.


ಅರ್ಜಿ ಸಲ್ಲಿಸಲು ಅಕ್ಟೋಬರ್ 26ಕೊನೆಯ ದಿನ. ಅರ್ಜಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿ, ಡಾ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಇವರಿಗೆಖುದ್ದಾಗಿ, ಅಂಚೆ ಅಥವಾ Email:kanndacultureudupi@gmail.com ಮೂಲಕ ಕಳುಹಿಸಬಹುದಾಗಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿಸಂಖ್ಯೆ ದೂ:08202986168 ಹಾಗೂ ಮೊ: 9591475884 ಅನ್ನು ಸಂಪರ್ಕಿಸಬಹುದು. 


Views: Loading...

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top