ಸುರತ್ಕಲ್: ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್ ಇಲ್ಲಿನ ಹಳೆ ವಿದ್ಯಾರ್ಥಿಗಳ 'ಪುನರ್ಮಿಲನ' ಕಾರ್ಯಕ್ರಮವು ಇತ್ತೀಚಿಗೆ ಜರುಗಿತು. ಹಿಂದೂ ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಶ್ರೀ ಜಯಚಂದ್ರ ಹತ್ವಾರ್ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಹಾಗೂ ನೋಟರಿ ಹೆಚ್. ವಿ. ರಾಘವೇಂದ್ರ ಮುಖ್ಯ ಅತಿಥಿಯಾಗಿದ್ದರು. ಶಾಲೆಯ ಹಳೆ ವಿದ್ಯಾರ್ಥಿಗಳ ನೂತನ ಒಕ್ಕೂಟ 'ವಿದ್ಯಾರ್ಥಿ ಫೋರಂ' ನ್ನು ಈ ಸಂದರ್ಭದಲ್ಲಿ ರಚಿಸಲಾಯಿತು. ಇದರ ನೂತನ ಅಧ್ಯಕ್ಷರಾಗಿ ಡಾ. ಸಮರ್ಥ ಶೆಣೈ ಹಾಗೂ ಕಾರ್ಯದರ್ಶಿಯಾಗಿ ಡಾ. ಪುನೀತ್ ಬೇಕಲ್ ಆಯ್ಕೆಯಾದರು.
ಹಿಂದೂ ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಎಚ್. ಶ್ರೀರಂಗ, ಶಾಲೆಯ ನಿವೃತ್ತ ಪ್ರಾಂಶುಪಾಲ ಶ್ರೀಕಾಂತ್ ಚಿಪಳೂಣ್ಕರ್, ಹಿರಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಆಶಾ ಬಿ. ಅಮಿನ್, ಶಾಲಾ ಸಂಚಾಲಕ ಶ್ರೀ ವಿಶ್ವರಾಜ್ ಇಡ್ಯಾ, ಶಾಲಾ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಕೆ.ಸಿ, ಹಿರಿಯ ಶಿಕ್ಷಕಿ ಶ್ರೀಮತಿ ಪುಷ್ಪ ಸಾಲಿಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಹಳೆಯ ನಿರ್ಗಮಿತ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಹಳೆ ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಾಲೆಯ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹೆಚ್.ವಿ. ಸಂಘದ ಉಪಾಧ್ಯಕ್ಷರಾದ ರಮೇಶ್ ಟಿ.ಎನ್, ಮಾಜಿ ಕಾರ್ಯದರ್ಶಿ ಎಂ. ವೆಂಕಟ್ರಾವ್, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ವಿನಯ ಆಚಾರ್, ಕಾರ್ಯದರ್ಶಿ ಶ್ರೀನಿವಾಸ ಕುಳಾಯಿ, ಶಿಕ್ಷಕ- ರಕ್ಷಕ ಸಂಘದ ಮಾಜಿ ಅಧ್ಯಕ್ಷ ಡಾ. ರಚನಾ ಕೊರ್ಕೋಡೆ, ಹಿರಿಯರಾದ ಎಚ್.ಯು. ಅನಂತಯ್ಯ ಹಾಗೂ ಈ ಕಾರ್ಯಕ್ರಮಕ್ಕೆ ಆಗಮಿಸಿದ ಹಳೆ ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ ಸಿ, ಶ್ರೀಮತಿ ಸವಿತಾ, ಉಪ ಪ್ರಾಂಶುಪಾಲೆ ಶ್ರೀಮತಿ ಅಶ್ವಿನಿ ಐತಾಳ್, ಶ್ರೀಮತಿ ವಾಣಿ ಕೆ, ಶ್ರೀಮತಿ ಮೀರಾ, ಶ್ರೀಮತಿ ಸುಧಾ ಶೆಣೈ, ಶ್ರೀಮತಿ ಸುಮಂಗಲಾ, ಶ್ರೀಮತಿ ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು. ಶ್ರೀಮತಿ ಧನಲಕ್ಷ್ಮಿ ವಂದಿಸಿದರು.

