ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಗುರುಅಭಿವಂದನೆ’ ಕಾರ್ಯಕ್ರಮ

Upayuktha
0

 


ಪುತ್ತೂರು: ಒಬ್ಬ ಶಿಕ್ಷಕನಿಗೆ ಪ್ರತಿನಿತ್ಯಓದುವ ಹಂಬಲ ಅತಿಮುಖ್ಯ, ಉತ್ತಮ ಶಿಕ್ಷಕ ಹೆಚ್ಚಿನ ತಿಳುವಳಿಕೆ ಹೊಂದಿರಬೇಕು. ವಿದ್ಯಾರ್ಥಿಗಳಲ್ಲಿರುವ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಸಾಮರ್ಥ್ಯ ಆತನಲ್ಲಿರಬೇಕು. ಭವಿಷ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಬರಲಿರುವವರು ಆ ಹುದ್ದೆಯ ಬಗ್ಗೆ ಶ್ರದ್ಧೆ ಮತ್ತುಗೌರವವನ್ನು ಹೊಂದಿರಬೇಕು ಎಂದು ವಿವೇಕಾನಂದ ಪದವಿ ಪೂರ್ವಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಜೀವನ್‌ ದಾಸ್ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್‌ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರುಳಿಕೃಷ್ಣ ಕೆ. ಎನ್. ಮಾತನಾಡಿ, ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲದೆ ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಯುವಜನತೆ ಉತ್ತಮ ವ್ಯಕ್ತಿಗಳ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದರು.


ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್‌ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಭವಿಷ್‌ಘಟಕದ ಸಂಯೋಜಕ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಮೋದ್ ಎಂ. ಜಿ. ಸ್ವಾಗತಿಸಿ, ಭವಿಷ್‌ ಘಟಕದ ಸಹ ಸಂಯೋಜಕಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಕವಿತಾ ವಂದಿಸಿ, ತೃತೀಯ ವರ್ಷದ ವಾಣಿಜ್ಯ ವಿಭಾಗದ ದೀಪ್ತಿ ಪ್ರಭು ಆಶಯಗೀತೆ ಹಾಡಿ, ತೃತೀಯ ಕಲಾ ವಿಭಾಗದ ಕೆ. ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.


Views: Loading...

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top