ಅ.24: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Upayuktha
0

 


ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅಕ್ಟೋಬರ್ 24 ಶನಿವಾರದಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ. 2025-26ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಇಲ್ಲಿ ಪದವಿ ಪ್ರಧಾನ ಮಾಡಲಾಗುತ್ತದೆ.


ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ. 


ಅಂದು ಬೆಳಿಗ್ಗೆ 10.30 ಗಂಟೆಗೆ ನಡೆಯುವ ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ.ಕೆ.ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲದ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ಇದರ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿರುವ ಅಭಯ್ ಅನಂತ್ ಗುಪ್ತೆ ಮುಖ್ಯ ಅತಿಥಿಗಳಾಗಿ ಆಗಮಿಸುತ್ತಾರೆ. ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top