ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Shreya Hegde
0

 ಆರೋಗ್ಯದ ರಕ್ಷಣೆಗೆ ವೈಜ್ಞಾನಿಕ ಕೈಗಳ ಸ್ವಚ್ಛತೆ ಅನಿವಾರ್ಯ: ಡಾ. ಪ್ರಸನ್ನಕುಮಾರ ಐತಾಳ್

‌



ಉಜಿರೆ: ವಿಶ್ವ ಆರೋಗ್ಯ ಸಂಸ್ಥೆಯ ಕರೆಯ ಮೇರೆಗೆ ಜಗತ್ತಿನ ಸುಮಾರು ಎಪ್ಪತ್ತಕ್ಕೂ ಹೆಚ್ಚು ದೇಶಗಳಲ್ಲಿ ವೈಜ್ಞಾನಿಕವಾಗಿ ಕೈ ತೊಳೆಯುವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಇದು ಅತ್ಯಂತ ಅನಿವಾರ್ಯ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ತಿಳಿಸಿದರು.


ಅವರು ಕಾಲೇಜಿನ ಸಂಸ್ಕೃತ ಸಂಘ, ಯೂತ್ ರೆಡ್ ಕ್ರಾಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ (ಎನ್.ಎಸ್.ಎಸ್.) ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 'ವಿಶ್ವ ಕೈ ತೊಳೆಯುವ ದಿನಾಚರಣೆ' ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ಕೈ ತೊಳೆಯುವ ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.



ಅಪಾಯಕಾರಿ ಕಾಯಿಲೆಗಳಿಗೆ ತಡೆ: ಗಲೀಜು, ಕಸ, ಮೂತ್ರ, ಮಲ ವಿಸರ್ಜನೆ ಹಾಗೂ ಪ್ರಾಣಿಗಳನ್ನು ಮುಟ್ಟಿದ ನಂತರ ಕೈಗಳನ್ನು ಸ್ವಚ್ಛಗೊಳಿಸುವುದು ಬಹಳ ಮುಖ್ಯ. ಹಿಂದೆ ಕೈಯ ಅಸುರಕ್ಷತೆಯಿಂದಾಗಿ ಅನೇಕ ಮಕ್ಕಳು 'ಡಯೇರಿಯಾ' (ಭೇದಿ) ಮುಂತಾದ ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಮೃತಪಡುತ್ತಿದ್ದರು ಎಂದು ಅವರು ವಿವರಿಸಿದರು.


ಕೋವಿಡ್ ನಂತರದ ಬದಲಾವಣೆ: ಕರೋನಾ ಮಹಾಮಾರಿಯ ನಂತರ ಸಮಾಜದಲ್ಲಿ ಕೈ ತೊಳೆಯುವ ಸರಿಯಾದ ಪರಿಪಾಠ ಬೆಳೆದುಬಂದಿದ್ದು, ಇದನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಯೂತ್ ರೆಡ್ ಕ್ರಾಸ್ ಸಂಯೋಜಕಿ ಕವನಶ್ರೀ ಉಪಸ್ಥಿತರಿದ್ದರು. ಜತೆಗೆ ಸಂಸ್ಕೃತ ಸಂಘ, ಯೂತ್ ರೆಡ್ ಕ್ರಾಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top