ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಮಾ. ನಾಗರಾಜು, ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ನಿಕಟಪೂರ್ವ ರಾಜ್ಯಾಧ್ಯಕ್ಷ ಮತ್ತು ಮಾಜಿ ಸಂಸದ ನಳಿನ್‍ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್.ಅಶ್ವತ್ಥನಾರಾಯಣ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಭಾಗವಹಿಸಿದ್ದರು.


