ಅಕ್ಷಯ ಕಾಲೇಜು ಎನ್ನೆಸ್ಸೆಸ್ ಘಟಕಕ್ಕೆ 'ಮಜ್ಜಾರಡ್ಕ ಶ್ರೀ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ-2026'

Shreya Hegde
0



ಪುತ್ತೂರು: ಅಕ್ಷಯ ಕಾಲೇಜು, ಸಂಪ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕವು ತನ್ನ ಐದು ವರ್ಷಗಳ ನಿರಂತರ ಸಮಾಜಮುಖಿ ಸೇವಾ ಚಟುವಟಿಕೆಗಳ ಗುರುತಿಗಾಗಿ ಪ್ರತಿಷ್ಠಿತ 'ಮಜ್ಜಾರಡ್ಕ ಶ್ರೀ ವಿಷ್ಣು ಯುವಸಿರಿ ಸಾಂಘಿಕ ಪ್ರಶಸ್ತಿ-2026'ಗೆ ಭಾಜನವಾಗಿದೆ.


ಕಳೆದ ಐದು ವರ್ಷಗಳಿಂದ ಕಾಲೇಜಿನ NSS ಘಟಕವು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಸುಮಾರು 1000ಕ್ಕೂ ಅಧಿಕ ಸ್ವಯಂಸೇವಕರ ಭಾಗವಹಿಸುವಿಕೆಯೊಂದಿಗೆ ವೃದ್ಧಾಶ್ರಮ ಸೇವೆ, ಅನ್ನದಾನ, ಸ್ವಚ್ಛತಾ ಅಭಿಯಾನ, ರಕ್ತದಾನ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ, ಗಿಡ ನೆಡುವಿಕೆ, ರಸ್ತೆ ಸುರಕ್ಷತಾ ಜಾಗೃತಿ, ಅಂಗನವಾಡಿ ಚಟುವಟಿಕೆಗಳು ಹಾಗೂ ಗ್ರಾಮೀಣ ಸೇವಾ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ.


ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಾಮಾಜಿಕ ಕಳಕಳಿ ಮತ್ತು ಸೇವಾ ಮನೋಭಾವವನ್ನು ಬೆಳೆಸುವಲ್ಲಿ NSS ಘಟಕವು ಮಹತ್ವದ ಪಾತ್ರ ವಹಿಸಿದೆ. ಈ ಎಲ್ಲಾ ಸೇವಾ ಚಟುವಟಿಕೆಗಳಿಗೆ ಸಂದಿರುವ ಪ್ರಶಸ್ತಿಯು ಕಾಲೇಜಿನ NSS ಘಟಕದ ಸಂಘಟಿತ ಪ್ರಯತ್ನ, ಕಾರ್ಯಕ್ರಮಾಧಿಕಾರಿಗಳ ಮಾರ್ಗದರ್ಶನ ಹಾಗೂ ಸ್ವಯಂಸೇವಕರ ನಿಸ್ವಾರ್ಥ ಸೇವೆಗೆ ಸಂದ ಗೌರವವಾಗಿದೆ.


ನವೆಂಬರ್ 1ರಂದು ಮಜ್ಜಾರಡ್ಕದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು. ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, NSS ಕಾರ್ಯಕ್ರಮಾಧಿಕಾರಿಗಳು ಹಾಗೂ ಸ್ವಯಂಸೇವಕರು ಸಂತಸ ವ್ಯಕ್ತಪಡಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top