ಡಾ.ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ " ವಿಮೋಚನೆ" ಬಿಡುಗಡೆ

Shreya Hegde
0



ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರು ಬರೆದ ಐತಿಹಾಸಿಕ ಕಾದಂಬರಿ "ವಿಮೋಚನೆ" ಯನ್ನು ನವೆಂಬರ್ ಒಂದರಂದು  ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾದಂಬರಿ ಕೃತಿಕಾರ ಡಾ.ಸುಬ್ರಹ್ಮಣ್ಯ ಭಟ್ಟರು , ಅವರ ಪತ್ನಿ ಭವ್ಯ ಜಿ.ಜಿ., ಮಕ್ಕಳಾದ ಅಭಿಗಮ್ಯ ರಾಮ್ , ಆಶ್ಮನ್ ಕೃಷ್ಣ, ಉಪಸ್ಥಿತರಿದ್ದರು.


ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಕಾಸರಗೋಡು ಗಡಿ ಭಾಗದ ಯುವಕರು ನಡೆಸಿದ ಕ್ರಾಂತಿಕಾರಿ ಹೋರಾಟದ ಕಥಾವಸ್ತು ಹೊಂದಿರುವ ಈ ಕಾದಂಬರಿಗೆ ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿ ಶ್ರೀ ಪ.ರಾಮಕೃಷ್ಣ ಶಾಸ್ತ್ರಿಯವರು ಮುನ್ನುಡಿ ಬರೆದಿರುತ್ತಾರೆ. ಪ್ರಸ್ತುತ ಕಾದಂಬರಿಯನ್ನು ಮೈಸೂರಿನ ಅಂಬಾರಿ ಪ್ರಕಾಶನದವರು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು (9448951856) ಸಂಪರ್ಕಿಸಬಹುದಾಗಿದೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top