ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹಾಗೂ ಡಾ. ಎನ್. ಎಸ್. ಎ. ಯುಂ. ಪದವಿಪೂರ್ವ ಕಾಲೇಜು ನಂತೂರು, ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ 2021ರ ದತ್ತಿ ನಿಮಿತ್ತ ದತ್ತಿ ಉಪನ್ಯಾಸ ಕಾರ್ಯಕ್ರಮವು ಗುರುವಾರ (ನ.5) ಅಪರಾಹ್ನ 2.45 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆಗೊಂಡಿದೆ.
ಈ ಕಾರ್ಯಕ್ರಮವನ್ನು ದ. ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ನವೀನ್ ಶೆಟ್ಟಿ ಕೆ. ಅವರು ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಪ್ರದೀಪ ಕುಮಾರ ಕಲ್ಕೂರ ಅವರು ಕವನ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಗೋವಿಂದದಾಸ ಕಾಲೇಜು ಸುರತ್ಕಲ್‌ನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಸಿ. ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕಿನ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ ಬಿ. ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಕಾರದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಡಾ. ಎನ್. ಎಸ್. ಎ. ಯುಂ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಆಡರನ್ ಸ್ವಾಗತ ಕೋರಿದ್ದಾರೆ.

