ಹುಬ್ಬಳ್ಳಿಯಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

Shreya Hegde
0



ಹುಬ್ಬಳ್ಳಿ: ನಗರದ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ಕನ್ನಡ ಕಲಾ ಕೃಷಿ ಬಳಗ ಮತ್ತು ಬಸವ ಸೇವಾ ಸಮಿತಿ ಸಂಯುಕ್ತ ಆಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಉತ್ಸಾಹ ಹಾಗೂ ಸಡಗರದಿಂದ ಆಚರಿಸಲಾಯಿತು.


ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡದೇವತೆ ತಾಯಿ ಭುವನೇಶ್ವರಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಕನ್ನಡಾಭಿಮಾನಿಗಳು ಗೌರವ ಸಮರ್ಪಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಚಂದ್ರಶೇಖರ ಹತ್ತಿ ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ಪ್ರೇಮಾ ಕರ್ಲಟ್ಟಿ ಅವರು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವದ ಕುರಿತು ಮಾರ್ಮಿಕವಾಗಿ ಮಾತನಾಡಿದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ಸಿದ್ಧಲಿಂಗಸ್ವಾಮಿ ಹಿರೇಮಠ, ಕಪಾಟಕರ ಹಾಗೂ ಶ್ರೀಮತಿ ವೀಣಾ ಬರಗಿ ಅವರು ಸಮಾರಂಭವನ್ನುದ್ದೇಶಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ಶಿವಯೋಗಪ್ಪ ಯಮ್ಮಿ ಅವರು ಕನ್ನಡಾಂಬೆಗೆ ನುಡಿನಮನ ಸಲ್ಲಿಸಿ ಮಾತನಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಗುಡೇನಕಟ್ಟಿ ಅವರ ಸುಮಧುರ ಗಾಯನ ಎಲ್ಲರಮನ ಸೆಳೆಯಿತು. ಅಂತಿಮವಾಗಿ ವಂದನಾರ್ಪಣೆಯೊಂದಿಗೆ ಈ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top